ಜೈನ ಮುನಿಗಳ ಹತ್ಯೆ – ಡಾ.ಡಿ ವೀರೇಂದ್ರ ಹೆಗ್ಗಡೆ ಖಂಡನೆ

Spread the love

ಜೈನ ಮುನಿಗಳ ಹತ್ಯೆ – ಡಾ.ಡಿ ವೀರೇಂದ್ರ ಹೆಗ್ಗಡೆ ಖಂಡನೆ

ಮಂಗಳೂರು: ಚಿಕ್ಕೋಡಿಯಲ್ಲಿ ನಡೆದಿರುವ ಜೈನ ಮುನಿಗಳ ಭೀಕರ ಹತ್ಯೆಗೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಖಂಡನೆ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಈ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ದಿಗಂಬರ ಮುನಿಗಳ ಈ ರೀತಿಯ ಹತ್ಯೆ ಇತಿಹಾಸದಲ್ಲಿಯೇ ಪ್ರಥಮವಾಗಿದ್ದು, ಜೈನ ಧರ್ಮದಲ್ಲಿ ಪೂರ್ವ ಜನ್ಮದ ತಪ್ಪು ಅಥವಾ ಈ ಜನ್ಮದ ತಪ್ಪುಗಳಿಗೆ ಉಪಸರ್ಗಗಳನ್ನು ಅನುಭವಿಸಬೇಕಾಗುತ್ತದೆ.

ಮುನಿಗಳಿಗಳಿಗೆ ಯಾವ ಕಾರಣಕ್ಕಾಗಿ ಈ ಉಪಸರ್ಗ ಅಂತಾ ಗೊತ್ತಿಲ್ಲ, ಕೃತ್ಯ ಎಸಗಿದವರ ಬಂಧನ ಆಗಿರೋದು ತಿಳಿದುಬಂದಿದೆ. ಇದಕ್ಕಾಗಿ ಸರ್ಕಾರ ಮತ್ತು ಪೊಲೀಸರರಿಗೆ ಅಭಿನಂದನೆ ಸಲ್ಲಿಸುತ್ತೇನೆ ತಪ್ಪಿದಸ್ಥರಿಗೆ ತಕ್ಷ ಶಿಕ್ಷೆಯಾಗಬೇಕು ಅಲ್ಲದೆ ಮುನಿಗಳಿಗೆ ಸರ್ಕಾರ ರಕ್ಷಣೆಯನ್ನು ಕೊಡಬೇಕಿದೆ ಎಂದು ಹೇಳಿದ್ದಾರೆ.


Spread the love