ಜೈನ ಮುನಿ ಹತ್ಯೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡನೆ

Spread the love

ಜೈನ ಮುನಿ ಹತ್ಯೆ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡನೆ

ಕಾರ್ಕಳ: ಚಿಕ್ಕೋಡಿ ಹಿರೇಕೋಡಿಯ ನಂದಿಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಖಂಡನೀಯ. ಇದು ಕೇವಲ ಒಬ್ಬ ವ್ಯಕ್ತಿಯ ಹತ್ಯೆಯಲ್ಲ ಸರ್ವ ಮನುಕುಲದ ಹತ್ಯೆಯಾಗಿದೆ. ತನ್ನ ಜೀವನವನ್ನು ಸೇವೆಗಾಗಿ ಮುಡಿಪಾಗಿಟ್ಟ, ಜೀವನ ಪರ್ಯಂತ ಮಾನವ ಸಮುದಾಯಕ್ಕೆ ಶಾಂತಿಯ ಸಂದೇಶವನ್ನು ಸಾರುತ್ತಿದ್ದ ಜೈನ ಮುನಿಗಳ ಹತ್ಯೆ ಕೇವಲ ಒಂದು ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಮಾನವ ಸಮುದಾಯಕ್ಕೆ ಆಘಾತ ಉಂಟು ಮಾಡಿದೆ. ಈ ಅಮಾನವೀಯ ಕ್ರತ್ಯವನ್ನು ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ರಾಷ್ಟ್ರೀಯ ಕಾರ್ಯ ಕಾರಿ ನಿರ್ದೇಶಕ ರೋಹಿತ್ ಕುಮಾರ್ ಕಟೀಲ್ ಖಂಡಿಸಿದ್ದಾರೆ.

ಮನುಕುಲದ ಸೇವೆಗಾಗಿ ತಮ್ಮ ಆಶೆ , ಆಕಾಂಕ್ಷೆ , ಆಸ್ತಿ , ಸಂಪತ್ತು , ಕುಟುಂಬವನ್ನು ತ್ಯಜಿಸಿರುವ ಜೈನ ಮುನಿಗಳು ಒಂದು ಸಮುದಾಯಕ್ಕೆ ಸೀಮಿತವಾಗದೆ ಜಗತ್ತಿಗೆ ಶಾಂತಿ, ಅಹಿಂಸೆ ಸಂದೇಶ ನೀಡುವವರು . ಅವರ ಸದ್ಗುಣ, ಸಹಾಯವನ್ನು ದುರುಪಯೋಗ ಮಾಡಿಕೊಂಡು ಕೊಲೆ ಮಾಡುವ ಮಟ್ಟಕ್ಕೆ ಇಳಿದಿರುವ ಕೊಲೆಗಡುಕರನ್ನು ಸರಕಾರ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಂಡು ತಕ್ಷಣವೇ ಕಠಿಣ ಶಿಕ್ಷೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ .


Spread the love

1 Comment

  1. Dont expect any justice from the state govt. They are focused on one community only.Use your position as Human rights person to get CBI/NIA involved.

Comments are closed.