ಜೋಕಟ್ಟೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿ ಸೆರೆ

Spread the love

ಜೋಕಟ್ಟೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ; ಆರೋಪಿ ಸೆರೆ

ಮಂಗಳೂರು: ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೈಕಂಪಾಡಿ ಮತ್ತು ಜೋಕಟ್ಟೆಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳೂರು ಉತ್ತರ ರೌಡಿ ನಿಗ್ರಹ ದಳ ಮತ್ತು ಪಣಂಬೂರು ಪೊಲೀಸರು ಬುಧವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ.

ಜೋಕಟ್ಟೆಯ ಬಂಡಸಾಲೆ ಮನೆಯ ಫಝಲ್ ಮುಹಮ್ಮದ್ ಮುಸ್ತಫಾ (24) ಬಂಧಿತ ಆರೋಪಿ. ಈತ ಕೇರಳದಿಂದ ಗಾಂಜಾವನ್ನು ರಿಕ್ಷಾದಲ್ಲಿ ಸಾಗಿಸಿಕೊಂಡು ಈ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯಿಂದ 15 ಸಾವಿರ ರೂ. ಮೌಲ್ಯದ 450 ಗ್ರಾಂ ಗಾಂಜಾ, 10 ಸಾವಿರ ರೂ. ಮೌಲ್ಯದ ಮೊಬೈಲ್, ಗಾಂಜಾ ಮಾರಾಟ ಮಾಡಿ ಲಭಿಸಿದ 5 ಸಾವಿರ ರೂ. ಹಾಗೂ 2 ಲಕ್ಷ ರೂ. ಮೌಲ್ಯದ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ಬೆಳ್ಳಿಯಪ್ಪ, ಇನ್‌ಸ್ಪೆಕ್ಟರ್ ಅಜ್ಮತ್ ಅಲಿ, ಎಸ್ಸೈ ಉಮೇಶ್ ಎಂ.ಎನ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.


Spread the love