ಜ.10: ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸಿದವರಿಗೆ ಅಭಿನಂದನಾ ಸಭೆ

Spread the love

ಜ.10: ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಗ್ರಾಪಂ ಚುನಾವಣೆಯಲ್ಲಿ ಸ್ಪರ್ಧಿಸಿದವರಿಗೆ ಅಭಿನಂದನಾ ಸಭೆ

ಉಡುಪಿ : ಉಡುಪಿ ಬ್ಲಾಕ್ ವ್ಯಾಪ್ತಿಯಲ್ಲಿ ಇತ್ತೀಚಿಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿದ ಮತ್ತು ಗೆದ್ದ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು  ಜನವರಿ 10ರಂದು ಆದಿತ್ಯವಾರ ಮಧ್ಯಾಹ್ನ 3.30ಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ, ಜಿಲ್ಲಾ ಕಾಂಗ್ರೆಸ್ ಭವನ, ಬ್ರಹ್ಮಗಿರಿಯಲ್ಲಿ ಹಮ್ಮಿಕೊಂಡಿದೆ.

ಈ ಸಭೆಯಲ್ಲಿ ಮಾಜಿ ಸಚಿವರಾದ   ಪ್ರಮೋದ್ ಮಧ್ವರಾಜ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ   ಅಶೋಕ್ ಕುಮಾರ್ ಕೊಡವೂರು ಭಾಗವಹಿಸಲಿದ್ದಾರೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ   ಸತೀಶ್ ಅಮೀನ್ ಪಡುಕೆರೆಯವರು ಸಭೆಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ ಎಂದು ಬ್ಲಾಕ್ ಪ್ರಧಾನ ಕಾರ್ಯದರ್ಶಿ ಜನಾರ್ದನ ಭಂಡಾರ್ಕಾರ್   ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love