
ಜ.12: ರಾಷ್ಟ್ರೀಯ ಯುವದಿನ, ಯುವ ಸಪ್ತಾಹ – ಯುವ ಜಾಗೃತಿ ಜಾಥಾ
ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟದ ಸಹಯೋಗದಲ್ಲಿ 2023ರ ಜ.12ರ ಗುರುವಾರ ಬೆಳಿಗ್ಗೆ 10.30ಕ್ಕೆ ನಗರದ ಮಂಗಳಾ ಕ್ರೀಡಾಂಗಣದಲ್ಲಿ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಯುವದಿನ, ಯುವ ಸಪ್ತಾಹ ಮತ್ತು ವಿವೇಕ ರಥ ಯುವ ಪಥ – ಯುವ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ.
ಇಂಧನ, ಕನ್ನಡ ಮತ್ತು ಸಂಸ್ಕøತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮಕೆಕ ಚಾಲನೆ ನೀಡುವರು.
ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಸನ್ಮಾನಿಸುವರು. ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಪುಷ್ಪಾರ್ಚನೆ ನೆರವೇರಿಸುವರು.
ಶಾಸಕರಾದ ಡಿ. ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸುವರು. ಸಂಸದರಾದ ನಳಿನ್ ಕುಮಾರ್ ಕಟೀಲ್ ರಥ ಉದ್ಘಾಟಿಸುವರು. ಮಂಗಳೂರು ಮೇಯರ್ ಜಯಾನಂದ ಅಂಚನ್ ಗೌರವ ಉಪಸ್ಥಿತಿ ವಹಿಸುವರು.
ಮುಖ್ಯ ಅತಿಥಿಗಳಾಗಿ ರಾಜ್ಯಸಭಾ ಸಂಸದರಾದ ಡಿ. ವೀರೇಂದ್ರ ಹೆಗ್ಗಡೆ, ಶಾಸಕರಾದ ಯು.ಟಿ. ಖಾದರ್, ಡಾ. ಭರತ್ ಶೆಟ್ಟಿ ವೈ, ರಾಜೇಶ್ ನಾಯ್ಕ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಉಮನಾಥ್ ಎ ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ. ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯೆ ಸಂಧ್ಯಾ ಎಂ. ಆಚಾರ್ ಭಾಗವಹಿಸುವರು.