ಝೀರೊ ಟ್ರಾಫಿಕ್ ನಲ್ಲಿ ಮಗುವನ್ನು ಕೊಂಡೊಯ್ದ ಆಂಬುಲೆನ್ಸ್ ಚಾಲಕನಿಗೆ ಅಭಿನಂದನೆಗಳ ಮಹಾಪೂರ
ಮಂಗಳೂರು : ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ 40 ದಿನದ ಪುಟ್ಟ ಮಗುವನ್ನು ಝೀರೊ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆದೊಯ್ಯಲಾಯಿತು.
ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಟ್ಟ ಮಗುವನ್ನು ಶಸ್ತ್ರ ಚಿಕಿತ್ಸೆಗಾಗಿ ಐಸಿಯು ಆಂಬುಲೆನ್ಸ್ ನಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಮಂಗಳೂರಿನಿಂದ ಬಿಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಸಕಲೇಶಪುರ, ಹಾಸನ, ನೆಲಮಂಗಲ ಮಾರ್ಗವಾಗಿ ಬೆಂಗಳೂರು ತಲುಪಿತು. ಝೀರೋ ಟ್ರಾಫಿಕ್ ವ್ಯವಸ್ಥೆಗೆ ರಾಜ್ಯ ಪೊಲೀಸ್ ಇಲಾಖೆಯು ಸಂಪೂರ್ಣ ಸಹಕಾರ ನೀಡಿತ್ತು.
ಹೃದಯ ಸಂಬಂಧಿ ಚಿಕಿತ್ಸೆಗಾಗಿ 40 ದಿನದ ಪುಟ್ಟ ಮಗುವನ್ನು ಝೀರೊ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಕರೆ ತಂದ ಆಂಬುಲೆನ್ಸ್ ಚಾಲಕ ಮುಹಮ್ಮದ್ ಹನೀಫ್ ಅವರ ಬಗ್ಗೆ ಭಾರೀ ಪ್ರಶಂಸೆ ವ್ಯಕ್ತವಾಗುತ್ತಿದೆ. ಬೆಂಗಳೂರು ತಲುಪಿದ ತಕ್ಷಣ ಹನೀಫ್ ಅವರನ್ನು ಅಲ್ಲಿ ನೆರೆದಿದ್ದವರು ಹೂ ಹಾರ ಹಾಕಿ ಸನ್ಮಾನಿಸಿ, ಅಭಿನಂದಿಸಿದರು. ಮಂಗಳೂರಿನಿಂದ ಆಯಂಬುಲೆನ್ಸ್ ಮಧ್ಯಾಹ್ನ 12:05ಕ್ಕೆ ಹೊರಟ್ದು, ಸಂಜೆ 4:35ಕ್ಕೆ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತಲುಪಿಸಿದ್ದಾರೆ.