ಟಿಕೆಟ್ ರಹಿತ ಪ್ರಯಾಣಿಕರಿಂದ 6 ಲಕ್ಷ ದಂಡ ವಸೂಲಿ

Spread the love

ಟಿಕೆಟ್ ರಹಿತ ಪ್ರಯಾಣಿಕರಿಂದ 6 ಲಕ್ಷ ದಂಡ ವಸೂಲಿ

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಹನಗಳಲ್ಲಿ ಟಿಕೆಟ್ ಪಡೆಯದೆ ಸಂಚರಿಸುವ ಪ್ರಯಾಣಿಕರಿಂದ 6,56,030 ರೂ  ದಂಡ ವಸೂಲಿ ಮಾಡಲಾಗಿದೆ.

ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ಸಂಸ್ಥೆಯ ತನಿಖಾ ತಂಡಗಳು ನವೆಂಬರ್-2022 ರ ಮಾಹೆಯಲ್ಲಿ ಒಟ್ಟು 15,530 ಟ್ರಿಪ್‍ಗಳನ್ನು ತಪಾಸಣೆ ನಡೆಸಿ 3326 ಟಿಕೆಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 6,32,030, ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1486 ಪ್ರಕರಣಗಳನ್ನು ದಾಖಲಿಸಲಾಗಿದೆ.

ಇಷ್ಟೇ ಅಲ್ಲದೆ ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 240 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 24ಸಾವಿರ ದಂಡ ವಿಧಿಸಲಾಗಿರುತ್ತದೆ. ಒಟ್ಟಾರೆಯಾಗಿ ನವೆಂಬರ್ ನಲ್ಲಿ  3566 ಪ್ರಯಾಣಿಕರಿಂದ ಒಟ್ಟು ರೂ.6,56,030 ದಂಡವನ್ನು ವಸೂಲಿ ಮಾಡಲಾಗಿದೆ.

ಪ್ರಯಾಣಿಕರು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸುವಾಗ ಅಧಿಕೃತ ಟಿಕೇಟ್, ‘ದಿನದ ಪಾಸು, ಮಾಸಿಕ ಪಾಸುಗಳನ್ನು ಹೊಂದಿ ಪ್ರಯಾಣಿಸುವುದು. ಇದರಿಂದ ಅನಗತ್ಯ. ದಂಡ ಕಟ್ಟುವುದನ್ನು ತಡೆಯಬಹುದಾಗಿದೆ ಹಾಗೂ ಇಂತಹ ಪ್ರವೃತ್ತಿಯಿಂದ ಸಂಸ್ಥೆಯು ಉತ್ತಮ ಸೇವೆಯನ್ನು ಪ್ರಯಾಣಿಕರಿಗೆ ನೀಡಲು ಸಹಾಯವಾಗುತ್ತದೆ.

ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಪುರುಷ ಪ್ರಯಾಣಿಕರು ಆಸನಗಳನ್ನು ತೆರವು ಮಾಡಿಕೊಡುವ ಮೂಲಕ ಅವರಿಗೆ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ತಿಳಿಸಿದ್ದಾರೆ.


Spread the love