ಟಿಪ್ಪರ್ ಲಾರಿ ಡಿಕ್ಕಿಯಲ್ಲಿ ಮೈಸೂರು ಲೋಕಾಯುಕ್ತ ಎಸ್‌ಪಿ ಸಾವು

Spread the love

ಟಿಪ್ಪರ್ ಲಾರಿ ಡಿಕ್ಕಿಯಲ್ಲಿ ಮೈಸೂರು ಲೋಕಾಯುಕ್ತ ಎಸ್‌ಪಿ ಸಾವು

ರಾಮನಗರ: ಕೆಂಗೇರಿ ಸಮೀಪ ಸಂಭವಿಸಿರುವ ಭೀಕರ ಅಪಘಾತದಲ್ಲಿ ಮೈಸೂರು ಜಿಲ್ಲಾ ಲೋಕಾಯುಕ್ತ ಎಸ್‌ಪಿ ರವಿಕುಮಾರ್ ಸಾವಿಗೀಡಾಗಿದ್ದಾರೆ.

ಸ್ವಿಫ್ಟ್ ಕಾರಿಗೆ ಟಿಪ್ಪರ್ ಲಾರಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಮೈಸೂರು ಲೋಕಾಯುಕ್ತ ಎಸ್‌ಪಿ ಹಾಗೂ ಕಾರ್ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕುಂಬಳಗೂಡು ಪ್ಲೈ ಓವರ್ ಬಳಿ ಅಪಘಾತ ನಡೆದಿದೆ. ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದು ಮುಂದಕ್ಕೆ ನುಗ್ಗಿರುವ ಟಿಪ್ಪರ್ ಲಾರಿ ಕಾರ್‌ಗೆ ಡಿಕ್ಕಿ ಹೊಡೆದಿದೆ.

ಮೈಸೂರು ಲೋಕಾಯುಕ್ತ ಎಸ್‌ಪಿ ರವಿಕುಮಾರ್ ಹಾಗೂ ಅವರ ಕಾರು ಚಾಲಕ ಕಿರಣ್ ಮೃತ ದುರ್ದೈವಿಗಳು. ಕಾರಿನಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಆಗಮಿಸುತ್ತಿದ್ದಾಗ ಅಪಘಾತ ಸಂಭವಿಸಿದೆ.

ರಾಜರಾಜೇಶ್ವರಿ ಆಸ್ಪತ್ರೆಗೆ ಮೃತ ದೇಹಗಳನ್ನು ರವಾನಿಸಲಾಗಿದ್ದು ಕುಂಬಳಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love