ಟಿಪ್ಪು ಜಯಂತಿ: ಮಡಿಕೇರಿ ವಿಎಚ್‌ಪಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿ ಹಲವರು ಪೊಲೀಸ್ ವಶಕ್ಕೆ

Spread the love

ಟಿಪ್ಪು ಜಯಂತಿ: ಮಡಿಕೇರಿ ವಿಎಚ್‌ಪಿ ಅಧ್ಯಕ್ಷ ಕೃಷ್ಣಮೂರ್ತಿ ಸೇರಿ ಹಲವರು ಪೊಲೀಸ್ ವಶಕ್ಕೆ
 
ಮಡಿಕೇರಿ: ನಗರದ ಓಂಕಾರೇಶ್ವರ ದೇಗುಲದಲ್ಲಿ ಶಾಂತಿಪೂಜೆ ನೆರವೇರಿಸಿ ಹೊರಬರುತ್ತಿದ್ದಂತೆಯೇ ಮುಂಜಾಗ್ರತಾ ಕ್ರಮವಾಗಿ ವಿಶ್ವ ಹಿಂದೂ ಪರಿಷತ್‌ನ ಅಧ್ಯಕ್ಷ ಕೃಷ್ಣಮೂರ್ತಿ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.

ಬಂಧನ ಖಂಡಿಸಿ ಹಿಂದೂ ಜಾಗರಣಾ ವೇದಿಕೆ ಹಾಗೂ ವಿಎಚ್‌ಪಿ ಮುಖಂಡರು ಆಕ್ರೋಶ ಹೊರಹಾಕಿದರು.

2015ರ ನವೆಂಬರ್ 10ರಂದು ನಗರದಲ್ಲಿ ನಡೆದಿದ್ದ ಟಿಪ್ಪು ಜಯಂತಿ ವೇಳೆ ಮೃತಪಟ್ಟಿದ್ದ ದೇವಪ್ಪಂಡ ಕುಟ್ಟಪ್ಪ ಸ್ಮರಣಾರ್ಥವಾಗಿ ಹಿಂದೂ ಜಾಗರಣಾ ವೇದಿಕೆ, ಬಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ನಗರದ ಓಂಕಾರೇಶ್ವರ ಸೇರಿ ಜಿಲ್ಲೆಯ ವಿವಿಧ ದೇಗುಲಗಳಲ್ಲಿ ಶಾಂತಿಪೂಜೆ ನೆರವೇರಿಸಿದ್ದಾರೆ.


Spread the love