ಟಿವಿ ವಾಹಿನಿಯ ವರದಿಗಾರನ ಮೇಲೆ ಹಲ್ಲೆ – ವಕೀಲನ ಬಂಧನ

Spread the love

ಟಿವಿ ವಾಹಿನಿಯ ವರದಿಗಾರನ ಮೇಲೆ ಹಲ್ಲೆ – ವಕೀಲನ ಬಂಧನ

ಮಂಗಳೂರು: ನಗರದ ಟಿವಿ ವಾಹಿನಿಯೊಂದರ ವರದಿಗಾರನ ಮೇಲೆ ಸೋಮವಾರ ಸಂಜೆಯ ವೇಳೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ನಗರದ ವಕೀಲ ಯದುನಂದನ್ ಎಂದು ಗುರುತಿಸಲಾಗಿದೆ.

ತಲೆಗೆ ತೀವ್ರವಾಗಿ ಹಲ್ಲೆಗೊಳಗಾದ ಪತ್ರಕರ್ತ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದ್ದು, ಹಲ್ಲೆಗೆ ನಿಖರ ಕಾರಣ ಸ್ಪಷ್ಟವಾಗಿಲ್ಲ

ಉರ್ವಾ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು, ಠಾಣೆಯಲ್ಲಿ ಪ್ರತಿದೂರು ಕೂಡ ದಾಖಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ.


Spread the love