ಟೋಲ್ ಪ್ರತಿಭಟನೆ : ಸಾಸ್ತಾನ ಮತ್ತು ಹೆಜಮಾಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

Spread the love

ಟೋಲ್ ಪ್ರತಿಭಟನೆ : ಸಾಸ್ತಾನ ಮತ್ತು ಹೆಜಮಾಡಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಉಡುಪಿ: ಪಡುಬಿದ್ರೆ ಹಾಗೂ ಸಾಸ್ತಾನ ಟೋಲ್ ಗೇಟ್ ಪ್ರತಿಭಟನೆಯ ಕಾವು ಏರಿದ್ದು, ಮುಂಜಾಗ್ರತಾ ಕ್ರಮವಾಗಿ ಹೆಜಮಾಡಿ ಹಾಗೂ ಕೋಟ ಟೋಲ್ ಗೇಟ್ ವ್ಯಾಪ್ತಿಯ 2 ಕಿಮಿ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾಧಿಕಾರಿ ವೆಂಕಟೇಶ್ ಅವರು ಉಡುಪಿ ಜಿಲ್ಲೆಯ ಪಡುಬಿದ್ರೆ ಠಾಣಾ ವ್ಯಾಪ್ತಿಯ ಸರಹದ್ದಿನ ಹೆಜಮಾಡಿ ಟೋಲ್ ಗೇಟ್ ಮತ್ತು ಕೋಟ ಠಾಣಾ ವ್ಯಾಪ್ತಿಯ ಸಾಸ್ತಾನ ಗುಂಡ್ಮಿ ಟೋಲ್ ಗೇಟಿನಲ್ಲಿ ಫೆಬ್ರವರಿ 9 ರಿಂದ ಟೋಲ್ ಸಂಗ್ರಹ ಮಾಡಲು ಆರಂಭಿಸಿದ್ದು, ಈ ಸಂಬಧಂ ಪ್ರತಿಭಟನೆ, ಮುಷ್ಕರ, ಬಂದ್ ಹಾಗೂ ಸಾರ್ವಜನಿಕ ನೆಮ್ಮದಿಗೆ ಭಂಗವಾಗುವ ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾಗುವ ಸಾಧ್ಯತೆಯಿರುವುದರಿಂದ ಉಡುಪಿ ಜಿಲ್ಲೆಯ ಪಡುಬಿದ್ರೆ ಠಾಣಾ ಸರಹದ್ದಿನ ಹೆಜಮಾಡಿ ಟೋಲ್ ಗೇಟ್ ಮತ್ತು ಸಾಸ್ತಾನ ಗುಂಡ್ಮಿ ಟೋಲ್ ಗೇಟಿನ 2 ಕಿಮ ವ್ಯಾಫ್ತಿಯಲ್ಲಿ ಫೆಬ್ರವರಿ 10 ರ ಬೆಳಿಗ್ಗೆ 6 ರಿಂದ ಫೆಬ್ರವರಿ 15 ರ ಮಧ್ಯರಾತ್ರಿ 12 ಗಂಟೆಯವರಗೆ ಸೆಕ್ಷನ್ 144 ಅನ್ವಯ ಪ್ರತಿಬಂಧಕಾಜ್ಞೆಯನ್ನು ಜಾರಿಗೆಗೊಳೀಸುವಂತೆ ಪೋಲಿಸ್ ಅಧೀಕ್ಷಕರು ಮನವಿ ಮಾಡಿದ್ದು ಅವರ ಮನವಿಯಂತೆ ಹೆಜಮಾಡಿ ಮತ್ತು ಸಾಸ್ತಾನ ಟೋಲ್ ಗೇಟ್ ಪ್ರದೇಶ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು ಸಾರ್ವಜನಿಕ ಆಸ್ತಿ ಕಾಫಾಡುವ ಅವಶ್ಯಕತೆ ಕಂಡು ಬಂದಿರುವುದರಿಂದ ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

ಪ್ರತಿ ಬಂಧಕಾಜ್ಞೆ ಜಾರಿ ಇರುವ ಅವಧಿಯಲ್ಲಿ ನಿಷೇದಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಯಾವುದೇ ಸಾರ್ವಜನಿಕರು 5 ಜನರು ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ಗುಂಪು ಸೇರುವುದು ಅಥವಾ ತಿರುಗುವುದನ್ನು ನಿಷೇದಿಸಿದೆ, ನಿಷೇದಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಕಾನೂನು ಸುವವ್ಯಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಯಾವುದೇ ರೀತಿಯ ಸಾರ್ವಜನಿಕ ಸಭೆ, ಸಮಾರಂಭ ಮೆರವೆಣಿಗೆ ವಿಜಯೋತ್ಸವ, ಕರಾಳೋತ್ಸವ ಪ್ರತಿಭಟನಾ ಮೆರವಣಿಗೆಯನ್ನು ನಿಷೇದಿಸಲಾಗಿದೆ. ನಿಷೇದಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸರಕಾರದಿಂದ ಅಥವಾ ಸರಕಾರದ ಆದೇಶದಂತೆ ನಡೆಸಲ್ಪಟುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅನ್ವಯವಾಗುವುದಿಲ್ಲ. ನಿಷೇದಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಯಾವುದೇ ಆಯುಧ, ಗುಡಗೋಲು, ಖಡ್ಗ ಭರ್ಜಿ, ಕೋಲು ಚೂರಿ, ದೊಣ್ಣೆ,ಲಾಠಿ ಸ್ಪೋಟಕ ವಸ್ತುಗಳು ಅಥವಾ ದೈಹಿಕ ಹಿಂಸೆಗೆ ಕಾರಣವಾಗುವ ಅಥವಾ ಮಾರಕವಾಗುವ ಇನ್ನಾವುದೇ ವಸ್ತುಗಳನ್ನು ಹೋಂದುವುದನ್ನು ನಿಷೇದಿಸಿದೆ ಈ ನೀಷೇಧ ಸರಕಾರಿ ನೌಕರರು ಕರ್ತವ್ಯ ನಿರ್ವಹಣೆಯ ವೇಳೆ ಲಾಠಿ ಆಯುಧವನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ. ನಿಷೇದಾಜ್ಞೆ ಜಾರಿಯಲ್ಲಿರುವ ಪ್ರದೇಶದಲ್ಲಿ ಸಾರ್ವಜನಿಕರ ಸ್ಥಳದಲ್ಲಿ ಯಾವುದೇ ಕೂಗನ್ನು ಉಚ್ಚರಿಸುವುದು ಪದ ಹಾಡುವುದು ಗಾಯನ ಮಾಡುವುದು, ಆವೇಶಕಾರಿ ಬಾಷಣ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು, ಚೇಷ್ಟೆ ಮಾಡುವುದು ಚಿತ್ರಗಳ ಪ್ರದರ್ಶನ ತಯಾರಿಕೆ ಅಥವಾ ಪ್ರಸಾರ ಮಾಡುವುದು ಕೂಡಾ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.


Spread the love