ಟೋಲ್ ಸಮಸ್ಯೆ: ಬೆಂಗಳೂರಿನಲ್ಲಿ ಸಚಿವ ರೇವಣ್ಣ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ

Spread the love

ಟೋಲ್ ಸಮಸ್ಯೆ: ಬೆಂಗಳೂರಿನಲ್ಲಿ ಸಚಿವ ರೇವಣ್ಣ ಅಧ್ಯಕ್ಷತೆಯಲ್ಲಿ ಗುರುವಾರ ಉನ್ನತ ಮಟ್ಟದ ಸಭೆ

ಉಡುಪಿ: ಉಡುಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಸಮಸ್ಯೆ ಪರಿಹರಿಸಲು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಅವರು ಗುರುವಾರ (ನ.29) ರಂದು ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ಆಯೋಜಿಸಿದ್ದಾರೆ.

ಗುರುವಾರ ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ಟೋಲ್ ಸಂಸ್ಥೆಯ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Spread the love