
Spread the love
ಠಾಣೆಯಲ್ಲಿ ಆರೋಪಿಗಳ ಮೇಲೆ ದೌರ್ಜನ್ಯ – ಪೊಲೀಸ್ ಅಧಿಕಾರಿಗಳ ಅಮಾನತು
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹಾಗೂ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡರ ಭಾವಚಿತ್ರವಿರುವ ಬ್ಯಾನರ್ ಅಳವಡಿಸಿ ಅದಕ್ಕೆ ಚಪ್ಪಲಿ ಹಾರ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯಕ್ಕೆ ಕಾರಣರಾದ ಪೊಲೀಸರನ್ನು ಅಮಾನತು ಮಾಡಿ ಜಿಲ್ಲಾ ಎಸ್ಪಿ ಅಮಾನತ್ತುಗೊಳಿಸಿ ಆದೇಶ ಹೊರಡಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ಅಧೀಕ್ಷಕರ ವಿಚಾರಣೆ ವರದಿ ಆಧಾರದ ಮೇಲೆ ಘಟನೆಗೆ ಕಾರಣರಾದ ಪುತ್ತೂರು ಗ್ರಾಮಾಂತರ ಠಾಣೆಯ ಪಿಎಸ್ಐ ಮತ್ತು ಪೊಲೀಸ್ ಕಾನ್ಸ್ ಟೇಬಲ್ ಹರ್ಷಿತ್ ಅವರನ್ನು ಅಮಾನತ್ತುಗೊಳಿಸಿದ್ದು, ಪುತ್ತೂರು ಡಿವೈಎಸ್ಪಿ ವಿರುದ್ದ ಇಲಾಖಾ ಶಿಸ್ತುಕ್ರಮಕ್ಕಾಗಿ ಮೇಲಧಿಕಾರಿಗಳಿಗೆ ವರದಿ ಮಾಡಲಾಗಿದೆ. ಮೂವರು ಅಧಿಕಾರಿಗಳ ವಿರುದ್ದ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿವೈಎಸ್ಪಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
Spread the love