ಡಬ್ಬಲ್ ಮರ್ಡರ್ ಆರೋಪಿ ವಿನೇಶ್ ಶೆಟ್ಟಿ ಸೆರೆ

Spread the love

ಡಬ್ಬಲ್ ಮರ್ಡರ್ ಆರೋಪಿ ವಿನೇಶ್ ಶೆಟ್ಟಿ ಸೆರೆ

ಮಂಗಳೂರು: ಭೂಗತ ಪಾತಕಿ ಚೋಟಾ ರಾಜನ್‌ ಸಹಚರ ವಿನೇಶ್ ಶೆಟ್ಟಿ (44) ಎಂಬಾತನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ಜೋಡಿ ಕೊಲೆ ಪ್ರಕರಣದ ಆರೋಪಿಯಾಗಿದ್ದ ವಿನೇಶ್ ಶೆಟ್ಟಿ ಜಾಮೀನಿನ ಮೇಲೆ ಬಿಡುಗಡೆಗೊಂಡು ವಿಚಾರಣೆಗೆ ಹಾಜರಾಗದೆ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಕೊಣಾಜೆ ಪೊಲೀಸರು ಮುಂಬೈನಲ್ಲಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ವಿನೇಶ್‌ ಉಡುಪಿಯ ಶಿರ್ವ ನಿವಾಸಿ. 2003ರಲ್ಲಿ ಕಪ್ಪು ಕಲ್ಲು ಕೋರೆ ಮಾಲೀಕ ವೇಣುಗೋಪಾಲ ನಾಯಕ್ ಮತ್ತು ಅವರ ಚಾಲಕ ಸಂತೋಷ್ ಎಂಬವರನ್ನು ಮುಡಿಪು ಇರಾ ಕ್ರಾಸ್ ಸಮೀಪ ಕೊಲೆಗೈಯ್ಯಲಾಗಿತ್ತು. ಪ್ರಕರಣ ಸಂಬಂಧ ಒಬ್ಬ ಮಹಿಳೆ ಸೇರಿದಂತೆ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿತ್ತು.

ಈ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಆರೋಪಿ 2015ರವರೆಗೂ ವಿಚಾರಣೆಗೆ ಹಾಜರಾಗುತ್ತಿದ್ದ. ಬಳಿಕ ತಲೆಮರೆಸಿಕೊಂಡಿದ್ದ. ವಿನೇಶ್ ವಿರುದ್ದ ವಾರಂಟ್ ಜಾರಿಯಾಗಿತ್ತು.

ವಿನೇಶ್ ವಿರುದ್ಧ ಮುಂಬೈ, ದಾವಣೆಗೆರೆ, ಪುಣೆ, ಹೈದರಬಾದ್, ಮಂಗಳೂರಿನಲ್ಲಿ ಕೊಲೆ, ಅಕ್ರಮ ಶಸ್ತ್ರಾಸ್ತ್ರ ಸಾಗಣೆ, ಕೊಲೆ, ಕೊಲೆಯತ್ನ ಸೇರಿದಂತೆ ಹಲವು ಪ್ರಕರಣಗಳಿವೆ.

ವಿನೇಶ್ ಮುಂಬೈನಲ್ಲಿ ಚೋಟಾ ಶಕೀಲ್ ಸಹಚರನಾಗಿ ಕಾರ್ಯನಿರ್ವಹಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.


Spread the love