ಡಾ.ಸಂಜೀವ ದಂಡೆಕೇರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

Spread the love

ಡಾ.ಸಂಜೀವ ದಂಡೆಕೇರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

ಮಂಗಳೂರು: ರಂಗಚಾವಡಿ ಸಾಹಿತ್ಯಿಕ-ಸಾಂಸ್ಕೃತಿಕ ಸಂಘಟನೆ ಮಂಗಳೂರು ಇದರ ಆಶ್ರಯದಲ್ಲಿ ಯಕ್ಷಹಾಸ್ಯ ವೈಭವ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ನವಂಬರ್ 6ರಂದು ಭಾನುವಾರ ಬೆಳಿಗ್ಗೆ 9.30ಕ್ಕೆ ಸುರತ್ಕಲ್ ಬಂಟರ ಭವನದಲ್ಲಿ ಜರಗಲಿದ್ದು, ಸಮಾರಂಭದಲ್ಲಿ ಬಯ್ಯಮಲ್ಲಿಗೆ ಖ್ಯಾತಿಯ ಚಲನ ಚಿತ್ರ ನಿರ್ಮಾಪಕ ಡಾ.ಸಂಜೀವ ದಂಡೆಕೇರಿ ಅವರನ್ನು ರಂಗಚಾವಡಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

sanjeev-danedekeri

ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ವಹಿಸಲಿದ್ದಾರೆ. ಸಮಾರಂಭವನ್ನು ಕರಾವಳಿ ಕಾಲೇಜು ಸಮೂಹ ಸಂಸ್ಥೆಯ ಅಧ್ಯಕ್ಷ ಗಣೇಶ್‍ರಾವ್ ಉದ್ಘಾಟಿಸಲಿದ್ದಾರೆ. ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲು, ಚಲನಚಿತ್ರ ನಿರ್ದೇಶಕ ದೇವದಾಸ್ ಕಾಪಿಕಾಡ್, ಚಲನಚಿತ್ರ ನಿರ್ಮಾಪಕ ಕುದ್ರಾಡಿಗುತ್ತು ಚಂದ್ರಶೇಖರ, ಮಾಡ ಬಿಜೆಪಿ ರಾಜ್ಯ ಹಿಂದುಳಿದ ವರ್ಗದ ಮೋರ್ಚಾ ಕಾರ್ಯದರ್ಶಿ ಸತ್ಯಜಿತ್ ಸುರತ್ಕಲ್, ಉದ್ಯಮಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ, ಉದ್ಯಮಿ ಯಾದವ ಕೋಟ್ಯಾನ್ ಪೆರ್ಮುದೆ, ಥಾಣ ಬಂಟ್ಸ್ ಅಸೋಸಿಯೇಶನ್ ಗೌರವ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಎಲ್.ಶೆಟ್ಟಿ, ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಧುನ್ ರೈ, ಉಡುಪಿ ಜಿ.ಪಂ. ಸದಸ್ಯೆ ಗೀತಾಂಜಲಿ ಸುವರ್ಣ ರಂಗನಟ ವಿ.ಜಿ.ಪಾಲ್, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಉಲ್ಲಾಸ್ ಆರ್.ಶೆಟ್ಟಿ, ಉಪಾಧ್ಯಕ್ಷ ಸುಧಾಕರ ಪೂಂಜ ಮೊದಲಾದವರು ಭಾಗವಹಿಸಲಿದ್ದಾರೆ.

ಬಳಿಕ ಸರಪಾಡಿ ಅಶೋಕ್ ಶೆಟ್ಟಿ ಸಾರಥ್ಯದಲ್ಲಿ ಯಕ್ಷ ಹಾಸ್ಯ ವೈಭವ ಹಾಗೂ ರವಿಕುಮಾರ್ ಸುರತ್ಕಲ್ ಅವರಿಂದ ಹಾಸ್ಯ ಮನರಂಜನೆ ನಡೆಯಲಿದೆ ಎಂದು ರಂಗಚಾವಡಿಯ ಪ್ರಕಟಣೆ ತಿಳಿಸಿದೆ.


Spread the love