ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

Spread the love

ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

ಧಾರವಾಡ: ಕಾರೊಂದು ಡಿವೈಡರ್ಗೆ ಡಿಕ್ಕಿಯಾಗಿ ಬಳಿಕ ನಡುರಸ್ತೆಯಲ್ಲೇ ಹೊತ್ತಿ ಉರಿದಿದ್ದು, ಇದರಲ್ಲಿ ಲೋಕಾಯುಕ್ತ ಇನ್ಸ್​​ಪೆಕ್ಟರ್ ಸಜೀವ ದಹನವಾಗಿದ್ದಾರೆ.

ಧಾರವಾಡ ಜಿಲ್ಲೆ ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಹಾವೇರಿ ಲೋಕಾಯುಕ್ತ ಇನ್ಸ್​​ಪೆಕ್ಟರ್​​​ ಆಗಿದ್ದ ಪಂಚಾಕ್ಷರಿ ಸಾಲಿಮಠ ಅವರು ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.

ಲೋಕಾಯುಕ್ತ ಇನ್ಸ್ಪೆಕ್ಟರ್ ಸಾಲಿಮಠ ಅವರು ಇಂದು (ಡಿಸೆಂಬರ್ 05) ಐ20 ಕಾರಿನಲ್ಲಿ ಗದಗ ಕಡೆ ಹೊರಟ್ಟಿದ್ದರು. ಈ ವೇಳೆ ಕಾರು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಬಳಿಕ ಬೆಂಕಿ ಹೊತ್ತಿಕೊಂಡಿದೆ ಎಂದು ತಿಳಿದುಬಂದಿದೆ.

ಡಿವೈಡರ್​​ಗೆ ಡಿಕ್ಕಿಯಾಗಿ ಬಳಿಕ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆಯೇ ಧಗಧಗ ಹೊತ್ತಿ ಉರಿದಿದೆ. ಇದರಿಂದ ಇನ್ಸ್ಪೆಕ್ಟರ್ PS ಸಾಲಿಮಠ ಅವರಿಗೆ ​​ ಲಾಕ್ ತೆಗೆದು ಹೊರಬರಲಾಗದೇ ಕಾರಿನೊಳಗೆ ಬೆಂಕಿಯಲ್ಲಿ ಬೆಂದು ಹೋಗಿದ್ದಾರೆ. ಬೆಂಕಿ ಹೊತ್ತಿಕೊಂಡು ನೋಡುತ್ತಿದ್ದಂತೆಯೇ ಸ್ಥಳೀಯರು ಮಾಹಿತಿ ನೀಡುತ್ತಿದ್ದಂತೆಯೇ ಸ್ಥಳಕ್ಕೆ ಅಣ್ಣಿಗೇರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಆದ್ರೆ, ಅಷ್ಟರೊಳಗೆ ಇನ್ಸ್ಪೆಕ್ಟರ್ ಕಾರಿನೊಳಗೆ ಸುಟ್ಟು ಕರಕಲಾಗಿದ್ದಾರೆ.

ಸಾಲಿಮಠ ಅವರು ಹಾವೇರಿ ಲೋಕಾಯುಕ್ತ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡಿದ್ದರು. ಗದಗದಲ್ಲಿ ಇರುವ ಕುಟುಂಬವನ್ನು ಭೇಟಿ ಮಾಡುವ ಸಲುವಾಗಿ ಅವರು ಹೊರಟಿದ್ದರು ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿರುವ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಣ್ಣಿಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love
Subscribe
Notify of

0 Comments
Inline Feedbacks
View all comments