ಡಿವೈಡರ್ ಗೆ ಢಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು; ನಾಲ್ವರಿಗೆ ಗಾಯ

Spread the love

ಡಿವೈಡರ್ ಗೆ ಢಿಕ್ಕಿ ಹೊಡೆದು ನಜ್ಜುಗುಜ್ಜಾದ ಕಾರು; ನಾಲ್ವರಿಗೆ ಗಾಯ

ಉಡುಪಿ: ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ನಾಲ್ವರು ಗಾಯಗೊಂಡ ಘಟನೆ ಅಂಬಾಗಿಲು ಬಳಿ ಗುರುವಾರ ರಾತ್ರಿ ಸಂಭವಿಸಿದೆ.

ಸಂತೆಕಟ್ಟೆಯಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಕಾರೊಂದು ಅಂಬಾಗಿಲು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಪೂರ್ಣವಾಗಿ ಕಾರು ನಜ್ಜುಗುಜ್ಜಾಗಿದೆ. ಅಪಘಾತದ ರಭಸಕ್ಕೆ ಕಾರಿನ ಭಾಗಗಳು ಸಂಪೂರ್ಣ ನಜ್ಜುಗುಜ್ಜಾಗಿ ರಸ್ತೆಯೆಲ್ಲಾ ಹರಡಿ ಬಿದ್ದಿದ್ದು ಕಾರಿನ ಇಂಜಿನ್ ಮಾರುದ್ದ ದೂರ ಹೋಗಿ ಬಿದ್ದಿದೆ.

ಘಟನೆಯಲ್ಲಿ ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಯಿಂದ ಉಡುಪಿ- ಅಂಬಾಗಿಲು ರಸ್ತೆಯಲ್ಲಿ ಕೆಲಕಾಲ ರಸ್ತೆ ಸಂಚಾರಕ್ಕೆ ತಡೆ ಉಂಟಾಗಿದ್ದು ಸ್ಥಳೀಯರು ಮತ್ತು ಪೊಲೀಸರ ಸಹಕಾರದಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಲಾಯಿತು.


Spread the love