ಡಿಸಿ,ಎಸಿ ಮೇಲೆ ಹಲ್ಲೆ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ಖಂಡನೆ

Spread the love

ಡಿಸಿ ಎಸಿ ಮೇಲೆ ಹಲ್ಲೆ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ಖಂಡನೆ

ಮಂಗಳೂರು: ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮತ್ತು ಕುಂದಾಪುರ ಉಪವಿಭಾಗ ಶಿಲ್ಪಾ ನಾಗ್ ಅವರ ಮೇಲೆ ಮರಳು ಮಾಫಿಯಾ ನಡೆಸಿದ ಹಲ್ಲೆಯನ್ನು ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ ಧರ್ಮಪ್ರಾಂತ್ಯದ ಅಧ್ಯಕ್ಷ ಅನಿಲ್ ಲೋಬೊ ಅವರು ದಕ್ಷಿಣ ಕನ್ನಡ ಮತ್ತು ಉಡುಪಿ ಉಭಯ ಜಿಲ್ಲೆಗಳಲ್ಲಿ ಸಾಕಷ್ಟು ನಿಷ್ಠಾವಂತ ಅಧಿಕಾರಿಗಳು ಸೇವೆ ಸಲ್ಲಿಸಿದ್ದು, ಈ ಜಿಲ್ಲೆಗಳು ಪ್ರಾಮಾಣಿಕ ಹಾಗೂ ದಕ್ಷ ಅಧಿಕಾರಿಗಳಿಗೆ ಮಾದರಿ ಜಿಲ್ಲೆಗಳಾಗಿವೆ. ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮತ್ತು ಕುಂದಾಪುರ ಉಪವಿಭಾಗ ಶಿಲ್ಪಾ ನಾಗ್ ಅವರ ಮೇಲೆ ಮರಳು ಮಾಫಿಯಾ ನಡೆಸಿದ ಹಲ್ಲೆ ಬುದ್ದಿವಂತರ ನಾಡು ಎಂದು ಗುರುತಿಸಿಕೊಂಡಿರುವ ಕರಾವಳಿ ಪ್ರದೇಶಕ್ಕೆ ಕಪ್ಪು ಚುಕ್ಕೆಯಾಗಿದೆ. ಪ್ರಾಮಾಣಿಕ ಮತ್ತು ದಕ್ಷ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ, ಸಮಾಜಘಾತುಕ ಶಕ್ತಿಗಳು ಅವರ ಮೇಲೆ ಹಲ್ಲೆ ನಡೆಸಿದ್ದು ಹೇಯಕರ. ಇದನ್ನು ಕಥೊಲಿಕ್ ಸಭಾ ಮಂಗಳೂರು ಪ್ರದೇಶ (ರಿ) ಉಗ್ರವಾಗಿ ಖಂಡಿಸುತ್ತದೆ. ಈ ಘಟನೆಯನ್ನು ರಾಜ್ಯದ ಮುಖ್ಯಮಂತ್ರಿ, ಗ್ರಹ ಇಲಾಖೆ ಗಂಬೀರವಾಗಿ ಪರಿಗಣಿಸಿ ತಪ್ಪಿತಸ್ಥರನ್ನು ಶಿಕ್ಷೆಗೊಳಪಡಿಸಿ, ಭವಿಷ್ಯದಲ್ಲಿ ಸಮಾಜಘಾತುಕ ಶಕ್ತಿಗಳು ಇಂತಹ ದುಸ್ಸಾಹಸ ಎಸಗುವ ಬಗ್ಗೆ ಯೋಚಿಸಲೂ ಆಗದಂತೆ ಪಾಠ ಕಲಿಸಬೇಕು ಎಂದು ವಿನಂತಿಸಿದ್ದಾರೆ.


Spread the love