ಡಿಸಿಯಿಂದ ಕೈಗಾರಿಕಾ ಸಬ್ ಲೇಔಟ್ ಕಾಮಗಾರಿ ಪರಿಶೀಲನೆ

Spread the love

ಡಿಸಿಯಿಂದ ಕೈಗಾರಿಕಾ ಸಬ್ ಲೇಔಟ್ ಕಾಮಗಾರಿ ಪರಿಶೀಲನೆ

ಚಾಮರಾಜನಗರ: ತಾಲ್ಲೂಕಿನ ಬದನಗುಪ್ಪೆ-ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿ 118.44 ಎಕರೆ ಜಮೀನಿನಲ್ಲಿ ನಿಮಾರ್ಣವಾಗುತ್ತಿರುವ ಕೈಗಾರಿಕಾ ಸಬ್ ಲೇಔಟ್ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಭೇಟಿ ನೀಡಿ ಪರಿಶೀಲಿಸಿದರು.

ಸಣ್ಣ ಪ್ರಮಾಣದ ಕೈಗಾರಿಕೆ ಪ್ರಾರಂಭಿಸುವವರಿಗೆ ಕಡಿಮೆ ವಿಸ್ತೀರ್ಣದ ಪ್ಲಾಟ್‌ಗಳನ್ನು ಹಂಚಿಕೆ ಮಾಡಿ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೈಗಾರಿಕಾ ಉಪ ಬಡಾವಣೆ ನಿರ್ಮಾಣ ಮಾಡಲಾಗುತ್ತಿದ್ದು, ಈ ಸಂಬಂಧ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಪರಿಶೀಲಿಸಿ ಮಾತನಾಡಿದರು.

ಜಿಲ್ಲೆಯ ಆರ್ಥಿಕ ಬೆಳವಣಿಗೆಗೆ ಪೂರಕವಾಗಲಿರುವ ಸಣ್ಣ ಪ್ರಮಾಣದ ಕೈಗಾರಿಕೆ ಸ್ಥಾಪನೆಗಾಗಿ 0.25 0.50, 9.45೧ ಮತ್ತು 2 ಎಕರೆ ಜಮೀನು ಕೋರಿ ಸಾಕಷ್ಟು ಮನವಿಗಳು ಮತ್ತು ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಇದಕ್ಕಾಗಿಯೇ ವಿಶೇಷವಾಗಿ ರೂಪುಗೊಳಿಸಲಾಗುತ್ತಿರುವ ಕೈಗಾರಿಕಾ ಸಬ್ ಲೇಔಟ್‌ನ ಕಾಮಗಾರಿಯನ್ನು ವಿಳಂಬ ಮಾಡದೇ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಸ್ತುತ ಕೆಲವೆಡೆ ಜಮೀನಿಗೆ ಸಂಬಂಧಿಸಿದಂತೆ ಇರುವ ತೊಡುಕುಗಳನ್ನು ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆ.ಐ.ಎ.ಡಿ.ಬಿ)ಅಧಿಕಾರಿಗಳು ಹಾಗೂ ತಹಶೀಲ್ದಾರರು ಕೂಡಲೇ ತುರ್ತು ಕ್ರಮ ಕೈಗೊಂಡು ಪರಿಹರಿಸುವಂತೆ ಜಿಲ್ಲಾಧಿಕಾರಿಯವರು ನಿರ್ದೆಶನ ನೀಡಿದರು.

ಪ್ರಸ್ತುತ ಕೈಗೆತ್ತಿಕೊಂಡಿರುವ ಕಾಮಗಾರಿಯನ್ನು ಕಾಲಮಿತಿಯೊಳಗೆ ನಿರ್ವಹಿಸಬೇಕು. ಸಣ್ಣ ಕೈಗಾರಿಕೋದ್ಯಮಿಗಳಿಗೆ ನೆರವಾಗಲು ಅನುಕೂಲವಾಗುವಂತೆ ಕೈಗಾರಿಕಾ ಪ್ಲಾಟ್‌ಗಳನ್ನು ಹಂಚಲು ಸೂಕ್ತವಾಗಿರುವಂತೆ ನೂತನ ಸಬ್ ಲೇಔಟ್ ಇರಬೇಕು ಎಂದರು.

ಕೈಗಾರಿಕಾ ಅಭಿವೃದ್ದಿಗೆ ಪೂರಕವಾಗಿರುವ ಎಲ್ಲ ಬಗೆಯ ಮೂಲ ಸೌಕರ್ಯಗಳನ್ನು ಒದಗಿಸಲು ಆದ್ಯತೆ ಮೇರೆಗೆ ಅಧಿಕಾರಿಗಳು ಕ್ರಮ ತೆಗೆದುಕೊಳ್ಳಬೇಕು. ಉದ್ದಿಮೆದಾರರು ಕೈಗಾರಿಕೆ ಘಟಕಗಳನ್ನು ನಿರ್ವಹಿಸಲು ಅಗತ್ಯ ನೆರವನ್ನು ನೀಡಬೇಕು ಎಂದು ಸೂಚಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕರಾದ ರಾಜೇಂದ್ರ ಪ್ರಸಾದ್, ತಹಶೀಲ್ದಾರ್ ಚಿದಾನಂದ ಗುರುಸ್ವಾಮಿ, ಕೆ.ಐ.ಎ.ಡಿ.ಬಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪೂರ್ಣಚಂದ್ರ ಇತರೆ ಅಧಿಕಾರಿಗಳು ಇದ್ದರು.


Spread the love