ಡಿ. 27: ಕೇಂದ್ರ ಸರಕಾರದ ಷಡ್ಯಂತ್ರದ ವಿರುದ್ಧ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರತಿಭಟನೆ
ಉಡುಪಿ: ನ್ಯಾಷನಲ್ ಹೆರಾಲ್ಡ್ ಕೇಸ್ ಗೆ ಸಂಬಂಧಿಸಿದಂತೆ ಸೋನಿಯಾ ಹಾಗೂ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯದ (ಇ.ಡಿ) ಮೂಲಕ ಸುಳ್ಳು ಅಪಾದನೆ ಹೊರಿಸಿದ ಕೇಂದ್ರ ಸರಕಾರದ ಷಡ್ಯಂತ್ರದ ವಿರುದ್ಧ ಹಾಗೂ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿನ (ಮನೆರೇಗಾ ) ಗಾಂಧಿ ಹೆಸರನ್ನು ತೆಗೆದು ರೋಜಿಗಾರ್ ಮತ್ತು ಅಜೀವಿಕಾ ಮಿಷನ್ ಮಸೂದೆ ತಂದು ಖಾತರಿ ಸ್ವರೂಪವನ್ನೇ ಬದಲಾಯಿಸಿದ ವಿರುದ್ಧ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷೆಯಾದ ಸೌಮ್ಯ ರೆಡ್ಡಿ ಯವರ ಉಪಸ್ಥಿತಿಯಲ್ಲಿ ಡಿಸೆಂಬರ್ 27 ರಂದು ಶನಿವಾರ ಮಧ್ಯಾಹ್ನ 3.00 ಗಂಟೆಗೆ ಅಜ್ಜರಕಾಡು ಗಾಂಧಿ ಚೌಕದ ಎದುರು ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಜ್ಯೋತಿ ಹೆಬ್ಬಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
