ತಂದೆಯಿಂದ ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನ – ಮಗ ಸಾವು

Spread the love

ತಂದೆಯಿಂದ ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನ – ಮಗ ಸಾವು

ಮಂಗಳೂರು: ಸ್ವಂತ ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಘಟನೆಯಲ್ಲಿ ಗಂಭೀರ ಗಾಯಗೊಂಡ ಆಸ್ಪತ್ರೆಗೆ ದಾಖಲಾಗಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ.

ಮೃತರನ್ನು ಜೆಪ್ಪಿನಮೊಗರು ನಿವಾಸಿ ಸ್ವಾಮಿತ್ ಶೆಟ್ಟಿ (25) ಎಂದು ಗುರುತಿಸಲಾಗಿದೆ.

ಸಾಕು ದನಗಳನ್ನು, ಕೋಳಿಗಳನ್ನು ಮನೆಯ ಹೊರಗಡೆ ಕಟ್ಟಿ ಹಾಕಿರುವ ವಿಚಾರದಲ್ಲಿ ತಂದೆ-ಮಗನ ನಡುವೆ ಸಂಘರ್ಷ ಏರ್ಪಟ್ಟಿತು. ಕುಪಿತಗೊಂಡ ತಂದೆ ವಿಶ್ವನಾಥ ಶೆಟ್ಟಿ, ಮಗ ಸ್ವಾಮಿತ್ ಶೆಟ್ಟಿ ಮೇಲೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದರು. ಗಂಭೀರ ಗಾಯಗೊಂಡ ಸ್ವಾಮೀತ್ ರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಆರೋಪಿಯನ್ನು ಘಟನೆ ನಡೆದಂದೇ ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದರು.


Spread the love