ತನ್ನ ಕಾರ್ಯಕರ್ತರಿಗೆ ರಕ್ಷಣೆ ನೀಡಲಾಗದವರು ‘ಜನೋತ್ಸವ’ ಮಾಡುವುದು ಯಾವ ಪುರುಷಾರ್ಥಕ್ಕೆ? – ಕೃಷ್ಣಮೂರ್ತಿ ಆಚಾರ್ಯ

Spread the love

ತನ್ನ ಕಾರ್ಯಕರ್ತರಿಗೆ ರಕ್ಷಣೆ ನೀಡಲಾಗದವರು ‘ಜನೋತ್ಸವ’ ಮಾಡುವುದು ಯಾವ ಪುರುಷಾರ್ಥಕ್ಕೆ? – ಕೃಷ್ಣಮೂರ್ತಿ ಆಚಾರ್ಯ

ಉಡುಪಿ:  ಬಿಜೆಪಿ ಸರ್ಕಾರ ಬಂದ ನಂತರ ದಿನ ದಿಂದ ದಿನ ಹಿಂದೂ ಮುಸ್ಲಿಂ ಸಹೋದರ ಹತ್ಯೆ ಮತ್ತಷ್ಟು ನಿರಂತರವಾಗಿ ಹೆಚ್ಚಾಗಿದ್ದು, ಹತ್ಯೆಯಾದ ಕುಟುಂಬಗಳಿಗೆ ಇನ್ನೂ ಸರಿಯಾಗಿ ನ್ಯಾಯ ಸಿಕ್ಕಿಲ್ಲ ಹೀಗಿರುವಾಗ ಬಿಜೆಪಿ ಯಾವ ಮುಖದಲ್ಲಿ ಜನೋತ್ಸವ ಮಾಡಲು ಹೊರಟಿದೆ ಎಂದು ಕಾಂಗ್ರೆಸ್ ಮುಖಂಡ ಕೃಷ್ಣಮೂರ್ತಿಯ ಆಚಾರ್ಯ ಪ್ರಶ್ನಿಸಿದ್ದಾರೆ

ಒಂದು ಕಡೆ ಬಿಜೆಪಿ ಸರ್ಕಾರ ಗುತ್ತಿಗೆದಾರರಿಂದ 40% ಕಮಿಷನ್ ಭ್ರಷ್ಟಾಚಾರ ಮಾಡುತ್ತಿದೆ ಮತ್ತೊಂದು ಕಡೆ ಜನರಿಗೆ ನಿರಂತರವಾಗಿ ದಿನ ಬಳಕೆಯ ವಸ್ತುಗಳ ಬೆಲೆ ಏರಿಕೆ ಜಿಎಸ್‌ಟಿ ಏರಿಕೆ ಪೆಟ್ರೋಲ್ ಡೀಸೆಲ್ ಗ್ಯಾಸ್ ಬೆಲೆ ಏರಿಕೆ ಇಷ್ಟೆಲ್ಲ ಜನರಿಗೆ ತೊಂದರೆ ಕೊಟ್ಟು ಯಾವ ಮುಖ ಇಟ್ಟುಕೊಂಡು ಜನೋತ್ಸವ ಮಾಡುತ್ತಾರೆ ಎಂದು ಪ್ರಶ್ನಿಸಿದ್ದಾರೆ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿಯೂ ಬಿಜೆಪಿ ಸರಕಾರ ವಿಫಲವಾಗಿದೆ, ಸರ್ಕಾರ ಬರಿ ಕಠಿಣ ಕ್ರಮ ಕಠಿಣ ಕ್ರಮ ಎನ್ನುತ್ತಾ ಬರಿ ಮಾತಿಗೆ ಮಾತ್ರ ಸೀಮಿತವಾಗಿದೆ ಹೊರತು ಅಮಾಯಕರ ಮೇಳೆ ದುಷ್ಕರ್ಮಿಗಳ ದಾಳಿ ಮಾತ್ರ ಕಡಿಮೆ ಆಗಿಲ್ಲ ಮುಂದುವರಿತಾನೆ ಇದೆ ಅಮಾಯಕರು ಮತ್ತಷ್ಟು ಬಲಿಯಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಯಾವ ಮುಖ ಇಟ್ಕೊಂಡು ಜನೋತ್ಸವ ಮಾಡಲು ಹೊರಟಿದೆ, ಮೊದಲು ಅಮಾಯಕರ ಜನರ ರಕ್ಷಣೆಗೆ ಮುಂದಾಗಲಿ ದಿನಬಳಕೆ ವಸ್ತುಗಳ ನಿರಂತರ ಬೆಲೆ ಏರಿಕೆ ಕಡಿಮೆ ಮಾಡಲಿ ಜಿ ಎಸ್ ಟಿ ತೆರಿಗೆ ತಕ್ಷಣ ನಿಲ್ಲಿಸಲಿ.

ಪ್ರವೀಣ್ ನೆಟ್ಟಾರೆ ಕೊಲೆ ಖಂಡನೀಯ ಪ್ರಕರಣದ ಆರೋಪಿಗಳನ್ನು ಯಾವುದೇ ಜಾತಿ ಧರ್ಮ ಲೆಕ್ಕಿಸದೆ ತಕ್ಷಣ ಬಂಧಿಸಿ,ಕಾನೂನಿನ ಪ್ರಕಾರ ಸೂಕ್ತ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕಾಗಿದೆ ಅದೇ ರೀತಿ ಇತ್ತೀಚೆಗೆ ಬೆಳ್ಳಾರೆ ಪರಿಸರದಲ್ಲಿ ಮಸೂದ್ ಕೊಲೆ ಸಂಭವಿಸಿದೆ ಇದು ಅತ್ಯಂತ ಖಂಡನೀಯ. ಚುನಾವಣೆ ಸಂದರ್ಭ ಹಿಂದು ಮುಸ್ಲಿಮರ ಹತ್ಯೆಯನ್ನು ಮುಂದೆ ಇಟ್ಟು ಕೊಂಡು ರಾಜಕೀಯ ಬೇಳೆ ಬೇಯಿಸುವುದು ಬಿಜೆಪಿಗೆ ಚಾಳಿಯಾಗಿ ಹೋಗಿದೆ , ಪ್ರಕರಣದ ಆರೋಪಿಗಳು ಯಾರೇ ಆದರೂ ಪಕ್ಷಾತೀತವಾಗಿ ಯಾವುದೇ ಜಾತಿ ಧರ್ಮ ನೋಡದೆ ಸೂಕ್ತ ತನಿಖೆ ನಡೆಸಿ ಅವರಿಗೆ ಶಿಕ್ಷೆ ಆಗಬೇಕು ಇಂತಹ ಘಟನೆಗಳು ಪದೇ ಪದೇ ಮುಂದೆ ಯಾವತ್ತೂ ಆಗದಂತೆ ಕ್ರಮ ವಹಿಸಬೇಕೆಂದು ಮಾಧ್ಯಮದ ಮೂಲಕ ಸರಕಾರವನ್ನು ಆಗ್ರಹಿಸಿದ್ದಾರೆ.


Spread the love