ತರೀಕೆರೆ: ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ ಜಗಳ: ಚಾಕು ಇರಿತದಿಂದ ಯುವಕ ಸಾವು

Spread the love

ತರೀಕೆರೆ: ಶಾಸಕರ ಅಭಿನಂದನಾ ಕಾರ್ಯಕ್ರಮದಲ್ಲಿ ಜಗಳ: ಚಾಕು ಇರಿತದಿಂದ ಯುವಕ ಸಾವು

ಚಿಕ್ಕಮಗಳೂರು: ನೂತನ ಕಾಂಗ್ರೆಸ್ ಶಾಸಕರ ಅಭಿನಂದನಾ ಸಮಾರಂಭದಲ್ಲಿ ಯುವಕನ ಕೊಲೆಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದಲ್ಲಿ ನಡೆದಿದೆ.

ಕೊಲೆಯಾದ ಯುವಕ ವರುಣ್ ಎಂದು ಗುರುತಿಸಲಾಗಿದೆ.

ತರೀಕೆರೆ ಶಾಸಕ ಶ್ರೀನಿವಾಸ್‌ ಅವರಿಗೆ ಅಭಿಮಾನಿಗಳು ಅಭಿನಂದನಾ ಸಮಾರಂಭವನ್ನ ಏರ್ಪಡಿಸಿದರು. ಈ ವೇಳೆ ಆರ್ಕೆಸ್ಟ್ರಾದಲ್ಲಿ ಹಾಡು ಬದಲಿಸುವ ವಿಚಾರದಲ್ಲಿ ಕಬಾಬ್ ಮೂರ್ತಿ ಹಾಗೂ ವರುಣ್ ಮಧ್ಯೆ ಗಲಾಟೆ ನಡೆದಿದೆ.

ಮಾತಿಗೆ ಮಾತು ಬೆಳೆದು ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದೆ. ಆರ್ಕೆಸ್ಟ್ರಾ ಮುಗಿಯುತ್ತಿದ್ದಂತೆ ಕಬಾಬ್ ಮೂರ್ತಿ, ವರುಣ್‌ಗೆ ಡ್ರ್ಯಾಗರ್ ಹಾಕಿದ್ದಾನೆ. ವರುಣ್‌ ಹೊಟ್ಟೆ ಹಾಗೂ ಪಕ್ಕಕೆಗೆ ಚಾಕುವಿನಿಂದ ಇರಿದಿದ್ದಾನೆ.

ಕೂಡಲೇ ಶಿವಮೊಗ್ಗಕ್ಕೆ ಕೊಂಡೊಯ್ದರು ವರುಣ್ ಸಾವನ್ನಪ್ಪಿದ್ದಾನೆ. ಮಂಜು ಹಾಗೂ ಸಂಜು ಕೈ ಹಾಗೂ ಕಾಲಿಗೆ ಚಾಕು ಇರಿತವಾಗಿದೆ.

ಸ್ಥಳಕ್ಕೆ ಎಸ್‌.ಪಿ.ಉಮಾ ಪ್ರಶಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love