ತಲಪಾಡಿ | ಮಾದಕ ವಸ್ತು ಎಂಡಿಎಂಎ ಮಾರಾಟ: ಇಬ್ಬರು ಆರೋಪಿಗಳ ಬಂಧನ

Spread the love

ತಲಪಾಡಿ | ಮಾದಕ ವಸ್ತು ಎಂಡಿಎಂಎ ಮಾರಾಟ: ಇಬ್ಬರು ಆರೋಪಿಗಳ ಬಂಧನ

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತಲಪಾಡಿ ಗ್ರಾಮದ ತಚ್ಚಣಿ ಗೌಂಡ್ ನಲ್ಲಿ ನಿಷೇದಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಫಝಲ್ ಹುಸೇನ್(33) ಮತ್ತು ನೌಶಾದ್(32) ಎಂದು ಗುರುತಿಸಲಾಗಿದೆ.

ಇವರು ತಚ್ಛಣಿ ಗೌಂಡ್ ನಲ್ಲಿ ಮಾದಕವಸ್ತು ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿ ಪ್ರಕರಣವನ್ನು ಭೇದಿಸಿದ್ದಾರೆ. ಬಂಧಿತರಿಂದ 15 ಗ್ರಾಂ ಎಂಡಿಎಂಎ, ಎರಡು ಮೊಬೈಲ್ ಫೋನ್, ಪೋರ್ಟಬಲ್ ಡಿಜಿಟಲ್ ತೂಕದ ಯಂತ್ರ ಸಹಿತ 95,500 ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Subscribe
Notify of

0 Comments
Inline Feedbacks
View all comments