ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

Spread the love

ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ

ಮಂಗಳೂರು: ಕೆೊಣಾಜೆ ಪೊಲೀಸ್ ಠಾಣಾ ಪ್ರಕರಣವೊಂದರಲಿ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸಾಹುಲ್ ಹಮೀದ್ @ ಸಾಹುಲ್ @ ಅಮಿ (33), ಎಂಬಾತನನ್ನು ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ರೌಡಿ ನಿಗ್ರಹ ದಳ ಸಿಬಂದಿಯವರು ದಸ್ತಗಿರು ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈತನ ಮೇಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ, ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿಯಲ್ಲಿ ಪ್ರಕರಣ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ಮತ್ತು ಮೈಸೂರು ಕೆ.ಆರ್.ನಗರ ಪೊಲೀಸ್ ಠಾಣೆಯಲಿಕಳವು ಪ್ರಕರಣ ದಾಖಲಾಗಿರುತ್ತದೆ.

ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು ಆರೋಪಿಯ ಪತ್ತೆಗೆ ನ್ಯಾಯಾಲಯ ಈತನ ಮೇಲೆ ವಾರಂಟ್ ಹೊರಡಿಸಿತ್ತು. ಆರೋಪಿಯನ್ನು ದಸ್ತಗಿರಿ ಮಾಡಿ ಮುಂದಿನ ಕ್ರಮಕ್ಕಾಗಿ ಈತನನ್ನು ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

ಮಂಗಳೂರು ನಗರದ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್, ನಿರ್ದೇಶನದಂತೆ ಹನುಮಂತರಾಯ ಡಿಸಿಪಿ (ಕಾನೂನು ಮತ್ತು ಸುವ್ಯವಸ್ಥೆ) ಡಿಸಿಪಿ ಗಣೇಶ್ ಮಾರ್ಗದರ್ಶನದಲ್ಲಿ ಮಂಗಳೂರು ದಕ್ಷಿಣ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರಾದ ಟಿ ಕೋದಂಡರಾಮ್ ಆದೇಶದಂತೆ ರೌಡಿ ನಿಗ್ರಹ ದಳ ಸಿಬಂದಿಯವರು ಪತ್ತೆ ಕಾರ್ಯದಲ್ಲಿ ಭಾಗವಹಿಸಿರುತ್ತಾರೆ.


Spread the love