ತಾನೂ ವೋಟ್ ಹಾಕುವುದಾಗಿ ಹಠ ಹಿಡಿದ ರಘುಪತಿ ಭಟ್ಟರ 3 ವರ್ಷದ ಮಗ!

Spread the love

ತಾನೂ ವೋಟ್ ಹಾಕುವುದಾಗಿ ಹಠ ಹಿಡಿದ ರಘುಪತಿ ಭಟ್ಟರ 3 ವರ್ಷದ ಮಗ!

ಉಡುಪಿ: ಈತ ಹೇಳಿಕೇಳಿ 3 ವರ್ಷದ ಪೋರ, ಆದರೂ ತನ್ನ ಅಪ್ಪ ಅಮ್ಮನ ಜೊತೆ ಹೋಗಿ ವೋಟ್ ಹಾಕುವುದಾಗಿ ಹಠ ಹಿಡಿದ್ದದ್ದು ಮಾತ್ರವಲ್ಲ ಕೊನೆಗೆ ಅತ್ತು ಕರೆದು ಕೈಗೆ ಇಂಕ್ ಹಾಕಿಸಿಕೊಂಡಿದ್ದಾನೆ.
ಆತ ಬೇರ ಯಾರು ಅಲ್ಲ ಉಡುಪಿ ಶಾಸಕ ರಘುಪತಿ ಭಟ್ಟರ ಮೂರು ವರ್ಷದ ಮಗ ರಿಹಾಂಶ್. ಉಡುಪಿ ನಗರಸಭೆಯ ಚುನಾವಣೆಯ ಸಂಬಂಧ ಶುಕ್ರವಾರ ತನ್ನ ಅಪ್ಪ ಅಮ್ಮನ ಜೊತೆಗೆ ಮತಗಟ್ಟೆಗೆ ಬಂದಿದ್ದು, ಅವರು ಮತದಾನ ಮಾಡಲು ಹೋಗುತ್ತಿದ್ದಂತೆ ನಾನೂ ವೋಟ್ ಹಾಕುತ್ತೇನೆ ಅಂತಾ ಹಠ ಮಾಡಿ, ಅಳಲಾರಂಭಿಸಿದ್ದಾನೆ.

ಬಳಿಕ ಶಾಸಕರ ಕಾರು ಚಾಲಕ ವಿಜಯ್, ಅಧಿಕಾರಿಗಳ ಬಳಿಗೆ ರಿಹಾಂಶ್ನನ್ನು ಕರದೊಯ್ದರು. ಮತಗಟ್ಟೆಯ ಹೊರಗೆ ಕುಳಿತ್ತಿದ್ದ ಅಧಿಕಾರಿಗಳು ಪೆನ್ನಿನಿಂದ ರಿಹಾಂಶ್ ಎಡಗೈ ತೋರ್ಬೆರಳಿಗೆ ಶಾಹಿಮುದ್ರೆ ಹಾಕಿಸಿದ್ದಾರೆ. ಆಗ ಆತನು ಅಳುವುದನ್ನು ನಿಲ್ಲಿಸಿದ್ದಾನೆ.

ಗಮ್ಮತ್ತು ಏನಂದರೆ ಶಾಹಿ ಹಾಕ್ಕೊಂಡು ಬಂದವನೇ ವಿಕ್ಟರಿ ಸಿಂಬಲ್ ತೋರಿಸುತ್ತಾನೆ. ಮೋದಿ ಗೆಲ್ತಾರೆ ಅಂತಾನೆ. ನಾಳೆ ಪೇಪರಲ್ಲಿ ಫೋಟೋ ಹಾಕಿ ಅಂತಾ ಮಾಧ್ಯಮದವರಿಗೆ ಮನವಿ ಮಾಡಿಕೊಂಡಿದ್ದಾನೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಶಾಸಕ ರಘುಪತಿ ಭಟ್, ಕಳೆದ ಕೆಲವು ದಿನಗಳಿಂದ ಮನೆಯಲ್ಲಿ ಚುನಾವಣೆಯದ್ದೇ ವಾತಾವರಣ. ಹಾಗಾಗಿ ವೋಟ್ ಹಾಕುತ್ತೇನೆ ಅಂತಾ ಹಠ ಮಾಡುತ್ತಿದ್ದ. ಆತ ಕೂಡ ನಮ್ಮಂತೆ ಮೋದಿ ಅಭಿಮಾನಿ ಅಂತಾ ಹೇಳಿದರು.


Spread the love