ತಾಯಿ, ಮಕ್ಕಳ ಬರ್ಬರ ಕೊಲೆ ಪ್ರಕರಣ ಭೇದಿಸಿದ ಪೊಲೀಸರಿಗೆ ಅಭಿನಂದನೆ – ಪ್ರಖ್ಯಾತ್ ಶೆಟ್ಟಿ

Spread the love

ತಾಯಿ, ಮಕ್ಕಳ ಬರ್ಬರ ಕೊಲೆ ಪ್ರಕರಣ ಭೇದಿಸಿದ ಪೊಲೀಸರಿಗೆ ಅಭಿನಂದನೆ – ಪ್ರಖ್ಯಾತ್ ಶೆಟ್ಟಿ

ಉಡುಪಿ: ಇಲ್ಲಿಗೆ ಸಮೀಪದ ನೇಜಾರುವಿನಲ್ಲಿ ನಡೆದ ನಾಲ್ಕು ಮಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕ್ಷಿಪ್ರವಾಗಿ ಬಂಧಿಸಿದ ಉಡುಪಿ ಜಿಲ್ಲಾ ಪೊಲೀಸರ ಕಾರ್ಯಕ್ಕೆ ಶ್ಲಾಘನೀಯ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಹೇಳಿದ್ದಾರೆ.

ಇಡೀ ಕರಾವಳಿಯನ್ನು ಬೆಚ್ಚಿಬೀಳಿಸಿದ ಪ್ರಕರಣದಿಂದಾಗಿ ಜನತೆ ಭಯದಲ್ಲಿ ಬದುಕುವ ವಾತಾವರಣವನ್ನು ಸೃಷ್ಠಿ ಮಾಡಿತ್ತು. ಜಿಲ್ಲೆಯ ದಕ್ಷ ಪೋಲಿಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ ಅವರು ಘಟನೆ ನಡೆದ ತಕ್ಷಣ ಸ್ಥಳಕ್ಕೆ ಆಗಮಿಸಿ ಪ್ರಕರಣದ ಕುರಿತು ಮಾಹಿತಿ ಪಡೆದು 5 ತನಿಖಾ ತಂಡಗಳನ್ನು ರಚಿಸಿ ಘಟನೆ ನಡೆದ ಮೂರು ದಿನಗಳ ಒಳಗಡೆ ಆರೋಪಿಯ ಜಾಡನ್ನು ಹುಡುಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ. ಹಾಗೂ ಅವರ ತಂಡಕ್ಕೆ ಉಡುಪಿ ಜನತೆಯ ಪರವಾಗಿ ಪತ್ರಿಕಾ ಪ್ರಕಟಣೆಯ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.


Spread the love

Leave a Reply