ತಾಯಿ, ಮಕ್ಕಳ ಹತ್ಯೆ: ಸೂಕ್ತ ತನಿಖೆಗೆ ಎಸ್ಪಿಯವರಿಗೆ ನಿರ್ದೇಶನ – ಲಕ್ಷ್ಮೀ ಹೆಬ್ಬಾಳ್ಕರ್

Spread the love

ತಾಯಿ, ಮಕ್ಕಳ ಹತ್ಯೆ: ಸೂಕ್ತ ತನಿಖೆಗೆ ಎಸ್ಪಿಯವರಿಗೆ ನಿರ್ದೇಶನ – ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ಭಾನುವಾರ ಉಡುಪಿ ಜಿಲ್ಲೆ ನೇಜಾರುವಿನಲ್ಲಿ ತಾಯಿ ಮತ್ತು ಮೂವರು ಮಕ್ಕಳ ಅಮಾನುಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆಯೇ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಘಟನೆ ಕುರಿತಂತೆ ಸೂಕ್ತ ತನಿಖೆ ಕೈಗೊಳ್ಳಲು ನಿರ್ದೇಶನ ನೀಡಿದ್ದೇನೆ. ಅಲ್ಲದೆ, ಅವರಿಂದ ನಿರಂತರ ಮಾಹಿತಿ ಪಡೆಯುತ್ತಿದ್ದೇನೆ. ಪ್ರಕರಣ ಸಂಬಂಧ 5 ತಂಡಗಳನ್ನು ರಚಿಸಲಾಗಿದ್ದು, ಶೀಘ್ರ ಪತ್ತೆ ಮಾಡುವ ವಿಶ್ವಾಸವನ್ನು ಪೋಲೀಸ್ ವರಿಷ್ಠಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.


Spread the love