ತಾಲೂಕು ಪಂಚಾಯತ್ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್ ನಿಧನ

Spread the love

ತಾಲೂಕು ಪಂಚಾಯತ್ ಮಾಜಿ ಸದಸ್ಯ ಭಾಸ್ಕರ್ ಕೋಟ್ಯಾನ್ ನಿಧನ

ಉಡುಪಿ: ಹಿರಿಯ ಕಾಂಗ್ರೆಸಿಗ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಭಾಸ್ಕರ್ ಕೋಟ್ಯಾನ್ (67) ಹೃದಯಾಘಾತದಿಂದ ನಿಧನ ಹೊಂದಿದರು.

ಉಡುಪಿ ತಾಲೂಕು ಪಂಚಾಯತಿಗೆ ಉದ್ಯಾವರ ಕ್ಷೇತ್ರದಿಂದ ಒಂದು ಬಾರಿ ಆಯ್ಕೆಯಾಗಿದ್ದ ಇವರು, ಗ್ರಾಮ ಪಂಚಾಯತ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಉದ್ಯಾವರ ಬಿಲ್ಲವ ಮಹಾಜನ ಸಂಘ ಇದರ ಮಾಜಿ ಅಧ್ಯಕ್ಷರಾಗಿದ್ದ ಇವರು, ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದ್ದುದನ್ನು ನೇರವಾಗಿ ಹೇಳುತ್ತಿದ್ದ ಇವರು ಉದ್ಯಾವರದಲ್ಲಿ ಹಲವು ವರ್ಷಗಳ ಹಿಂದೆ ನಡೆದ ಫಿಶ್ ಮಿಲ್ ವಿರೋಧಿ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು. ಉದ್ಯಾವರ ಗ್ರಾಮೀಣ ಕಾಂಗ್ರೆಸ್ಸಿನಲ್ಲಿ ಸಕ್ರಿಯವರಾಗಿದ್ದು, ಪತ್ನಿ, ಮಗಳು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.


Spread the love