
ತಿಂಗಳೊಳಗೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ; ವೀರಪ್ಪ ಮೊಯಿಲಿ
ಮಂಗಳೂರು: ರಾಜ್ಯ ಸರಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದ್ದು, ಜನತೆ ಬೇಸತ್ತು ಹೋಗಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬರುವ ವಾತಾವರಣ ಎಲ್ಲ ಕಡೆಗಳಲ್ಲಿ ಕಂಡು ಬರುತ್ತಿದೆ. ಗ್ರೌಂಡ್ ರಿಪೋರ್ಟ್ ನಲ್ಲೂ ಕಾಂಗ್ರೆಸ್ ಗೆಲ್ಲಲಿದೆ ಎನ್ನುವ ವರದಿ ಬಂದಿದೆ ಎಂದು ಎಐಸಿಸಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ವೀರಪ್ಪ ಮೊಯಿಲಿ ಹೇಳಿದರು.
ರವಿವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ಅವರು, ಕೆಪಿಸಿಸಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮ ಪಡಿಸಿದ್ದು, ಮಾ.7-8ರಂದು ಸ್ಕ್ರೀನಿಂಗ್ ಕಮಿಟಿ ಸಭೆ ನಡೆಸಿ ಫೈನಲ್ ಮಾಡಿ ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಿದೆ. ತಿಂಗಳೊಳಗೆ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದರು.
ಕಾಂಗ್ರೆಸ್‌ನಲ್ಲಿ ಸ್ಪರ್ಧಿಸಲು ಕಾರ್ಯಕರ್ತರು ಉಮೇದು ತೋರಿಸುತ್ತಿದ್ದು, ಅಭ್ಯರ್ಥಿ ಸ್ಥಾನಕ್ಕೆ ಸ್ಪರ್ಧೆ ಇದ್ದಷ್ಟು ಪಕ್ಷದ ಬಲಗೊಳ್ಳುತ್ತದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಈ ಸರಕಾರದ ಅವಧಿಯ ಎಲ್ಲ ಹಗರಣಗಳನ್ನು ತನಿಖೆಗೆ ಒಳಪಡಿಸಲಾಗುವುದು ಎಂದರು.
ಮುಖಂಡರಾದ ಅಭಯಚಂದ್ರ ಜೈನ್, ಐವನ್ ಡಿ’ಸೋಜ, ಶಶಿಧರ ಹೆಗ್ಡೆ, ನವೀನ್ ಡಿ’ಸೋಜ ಮೊದಲಾದವರಿದ್ದರು.