ತಿ.ನರಸೀಪುರ ಬಳಿ ಕಾರು-ಖಾಸಗಿ ಬಸ್ ಅಪಘಾತ – 10 ಮಂದಿ ಸಾವು

Spread the love

ತಿ.ನರಸೀಪುರ ಬಳಿ ಕಾರು-ಖಾಸಗಿ ಬಸ್ ಅಪಘಾತ – 10 ಮಂದಿ ಸಾವು

ಮೈಸೂರು: ಕುರುಬೂರು ಗ್ರಾಮದ ಪಿಂಜರ ಪೋಲ್ ಎಂಬಲ್ಲಿ ಕೊಳ್ಳೇಗಾಲ – ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ  ಸೋಮವಾರ ಮಧ್ಯಾಹ್ನ ಸಂಭವಿಸಿದ ಭೀಕರ ಅಪಘಾತದಲ್ಲಿ  10 ಮಂದಿ ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ. ಖಾಸಗಿ ಬಸ್ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತಪಟ್ಟವರು ಪೈಕಿ ಕೆಲವರು ಬಳ್ಳಾರಿ ಸಂಗನಕಲ್ ನಿವಾಸಿಗಳಾಗಿದ್ದಾರೆ. ಇವರು ಬಳ್ಳಾರಿ ಗ್ರಾಮೀಣ ಕ್ಷೇತ್ರದ ಸಂಗನಕಲ್ ನಿಂದ ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಎಲ್ಲರನ್ನೂ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರಗೆ ರವಾನಿಸಲು ಸಿದ್ಧತೆ ಮಾಡಲಾಗುತ್ತಿದೆ. ಸದ್ಯ ಚಾಮರಾಜನಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಟಿ.ನರಸೀಪುರ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love