ತುಮಕೂರಿನಲ್ಲಿ ಅಪಘಾತ: ಕುಂದಾಪುರ ಮೂಲದ ಛಾಯಾಗ್ರಾಹಕ ಗಂಭೀರ

Spread the love

ತುಮಕೂರಿನಲ್ಲಿ ಅಪಘಾತ: ಕುಂದಾಪುರ ಮೂಲದ ಛಾಯಾಗ್ರಾಹಕ ಗಂಭೀರ

ಕುಂದಾಪುರ: ಬೆಂಗಳೂರಿನಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಚಿತ್ರೀಕರಣ ಮುಗಿಸಿ ಮರಳಿ ಮನೆಗೆ ಬರುತ್ತಿದ್ದ ವೇಳೆ ಕಂಟೈನರ್ ಲಾರಿಗೆ ಹಿಂಬದಿಯಿಂದ‌ ಕಾರು ಢಿಕ್ಕಿ ಹೊಡೆದ ಪರಿಣಾಮ ಕುಂದಾಪುರ ಮೂಲದ ಛಾಯಾಗ್ರಾಹಕ ಸೇರಿದಂತೆ ಇಬ್ಬರು ಗಂಭೀರ ಗಾಯಗೊಂಡ ಘಟನೆ ತುಮಕೂರು ಸಮೀಪದ‌ ತಾವರೆಕೆರೆ ಬಳಿ ಸಂಭವಿಸಿದೆ.

 

ಇಲ್ಲಿನ‌ ನಾವುಂದದ ಮಾನಸ ಸ್ಟೂಡಿಯೋ ಮಾಲೀಕ ಹೇರೂರು ಅಶೋಕ್ ಶೆಟ್ಟಿ ಮತ್ತು ಅವರ ಪುತ್ರ ಪನ್ನಗ ಶೆಟ್ಟಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಫೋಟೋಗ್ರಫಿ ಮುಗಿಸಿ ಭಾನುವಾರ ತಡರಾತ್ರಿ ತಮ್ಮ ಕಾರಿನಲ್ಲಿ ಅಶೋಕ್ ಶೆಟ್ಟಿ ಮನೆಗೆ ಬರುತ್ತಿರುವ ವೇಳೆಯಲ್ಲಿ ನಸುಕಿ‌ನ ಜಾವ ಈ ಅವಘಡ ನಡೆದಿದೆ. ಕಾರು ತಮಕೂರು ಸಮೀಪದ ತಾವರೆಕೆರೆ ಸಮೀಪಿಸುತ್ತಿದ್ದಂತೆಯೇ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು, ಕಾರು ಚಲಾಯಿಸುತ್ತಿದ್ದ ಪನ್ನಗ ಶೆಟ್ಟಿ ಹಾಗೂ ಮುಂದೆ ಕುಳಿತಿದ್ದ ಅಶೋಕ್ ಶೆಟ್ಟಿಯವರಿಗೆ ಗಂಭೀರ ಗಾಯಗಳಾಗಿವೆ. ಕಾರಿನ ಹಿಂಬದಿ ಕುಳಿತಿದ್ದ ಇನ್ನೋರ್ವ ಛಾಯಾಗ್ರಾಹಕ ಕುಮಾರ್ ಯಾವುದೇ ಗಾಯಗಳಿಲ್ಲದೇ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಸದ್ಯ ಅಶೋಕ್ ಶೆಟ್ಟಿಯವರು ತುಮಕೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪುತ್ರ ಪನ್ನಗ ಶೆಟ್ಟಿಯವರನ್ನು ಹೆಚ್ಚಿನ‌‌ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love