ತುಮಕೂರು: ಶಿರಾ ಬಳಿ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ, 10ಕ್ಕೂ ಹೆಚ್ಚು ಜನರಿಗೆ ಗಾಯ

Spread the love

ತುಮಕೂರು: ಶಿರಾ ಬಳಿ ಭೀಕರ ರಸ್ತೆ ಅಪಘಾತ: 9 ಮಂದಿ ದುರ್ಮರಣ, 10ಕ್ಕೂ ಹೆಚ್ಚು ಜನರಿಗೆ ಗಾಯ

ತುಮಕೂರು:  ಗುರುವಾರ ನಸುಕಿನ ಜಾವ ತುಮಕೂರು ಜಿಲ್ಲೆಯ ಶಿರಾ ಹತ್ತಿರ ಕಳ್ಳಂಬೆಳ್ಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ತಕ್ಷಣಕ್ಕೆ ಶಿರಾದಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲಾರಿಗೆ ಕ್ರೂಸರ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದ್ದು, ಕ್ರೂಸರ್ ನಲ್ಲಿದ್ದವರೆಲ್ಲಾ ರಾಯಚೂರು ಜಿಲ್ಲೆಯ ಕೂಲಿ ಕಾರ್ಮಿಕರು ಎಂದು ತಿಳಿದುಬಂದಿದೆ.ರಾಯಚೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಘೋರ ದುರಂತ ಸಂಭವಿಸಿದೆ.

ನಸುಕಿನ ಜಾವ ರಾಯಚೂರು ಜಿಲ್ಲೆಯ ಹಾಗೂ ಉತ್ತರ ಕರ್ನಾಟಕದ ಬಡ ಕೂಲಿ ಕಾರ್ಮಿಕರನ್ನು ಹೊತ್ತ ಕ್ರೂಸರ್ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು. ಶಿರಾ ಬಳಿ ಬರುತ್ತಿದ್ದಾಗ ಲಾರಿಯನ್ನು ಓವರ್ ಟೇಕ್ ಮಾಡಲು ಹೋಗಿ ಚಾಲಕ ನಿಯಂತ್ರಣ ಕಳೆದುಕೊಂಡು ಡಿಕ್ಕಿಯಾಗಿ ಸ್ಥಳದಲ್ಲಿಯೇ 9 ಜನ ಕಾರ್ಮಿಕರು ಮೃತಪಟ್ಟಿದ್ದಾರೆ.

ಈ ಅಪಘಾತ ಇಂದು ನಸುಕಿನ ಜಾವ 4 ಗಂಟೆ ಸುಮಾರಿಗೆ ನಡೆದಿದೆ. ಕ್ರೂಸರ್​ನಲ್ಲಿ 20 ಜನರಿದ್ದು, ರಾಯಚೂರು ಜಿಲ್ಲೆಯರು ಎನ್ನಲಾಗುತ್ತಿದೆ. ಮೃತರಲ್ಲಿ ಮೂವರು ಮಹಿಳೆಯರು, ನಾಲ್ವರು ಪುರುಷರು, ಇಬ್ಬರು ಮಕ್ಕಳು ಸೇರಿ ಒಟ್ಟು 9 ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ. 11 ಜನ ಗಾಯಾಳುಗಳನ್ನ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love