ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ ವತಿಯಿಂದ ಅಶಕ್ತ ಕುಟುಂಬಗಳಿಗೆ ಆಹಾರ ಸಾಮಾಗ್ರಿ ವಿತರಣೆ
ಉಡುಪಿ: ಕೊರೊನಾ ಕಾರಣದಿಂದ ಲಾಕ್ ಡೌನ್ ಆಗಿ ಸಮಸ್ಯೆಗೊಳಗಾದ ಪಡಿತರ ಚೀಟಿ ಇಲ್ಲದವರಿಗೆ, ಅಶಕ್ತರಿಗೆ, ನಿರ್ಗತಿಕ ಕುಟುಂಬಗಳಿಗೆ ತೆಂಕನಿಡಿಯೂರು ಗ್ರಾಮೀಣ ಕಾಂಗ್ರೆಸ್ನ ವತಿಯಿಂದ ದಿನಬಳಕೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು.
 
 
 
 
ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ತೆಂಕನಿಡಿಯೂರು ಗ್ರಾಮ ಪಂಚಾಯತಿನ ಮಾಜಿ ಉಪಾಧ್ಯಕ್ಷರಾಗಿರುವ ಪ್ರಖ್ಯಾತ್ ಶೆಟ್ಟಿ ಇವರ ಪ್ರಾಯೋಜಕತ್ವದಲ್ಲಿ ಪಡಿತರ ಚೀಟಿ ಇಲ್ಲದವರಿಗೆ, ಅಶಕ್ತರಿಗೆ ಹಾಗೂ ನಿರ್ಗತಿಕ ಕುಟುಂಬಗಳಿಗೆ ಅಕ್ಕಿ, ಬೇಳೆ, ಚಾಪುಡಿ ಸೇರಿದಂತೆ ರೇಷನ್ ಸಾಮಗ್ರಿಗಳನ್ನು ವಿತರಿಸಲಾಯಿತು
ಈ ವೇಳೆ ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಾಯಕರಾದ ಗೋಪಾಲ್ ಕೃಷ್ಣ ಶೆಟ್ಟಿ, ಧನಂಜಯ್ ಕುಂದರ್, ಪ್ರಥ್ವಿರಾಜ್ ಶೆಟ್ಟಿ, ಸತೀಶ್ ನಾಯಕ್, ಕಲ್ಪನಾ, ಸುರೇಶ್ ಕುಮಾರ್, ಪ್ರಮೀಲಾ ವಿದ್ಯಾಧರ್ , ಅನೂಪ್ ಶೆಟ್ಟಿ, ಮಧುಸೂಧನ ಪೂಜಾರಿ, ಅಜಿತ್, ನಾಗೇಶ್, ರಮೇಶ್ ಕೋಟ್ಯಾನ್ ಉಪಸ್ಥಿತರಿದ್ದರು.
            












