
ತೆಂಕನಿಡಿಯೂರು ಗ್ರಾಮ ಪಂಚಾಯತ್ ಚುನಾವಣಾ ಪೂರ್ವಭಾವಿ ಸಭೆ ; ಹಲವು ಮಂದಿ ಬಿಜೆಪಿಗೆ ಸೇರ್ಪಡೆ
ಉಡುಪಿ: ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚುನಾವಣಾ ಪೂರ್ವಭಾವಿ ಸಭೆ ಭಾನುವಾರ ನೂತನವಾಗಿ ಉದ್ಘಾಟನೆಗೊಂಡ ತೆಂಕನಿಡಿಯೂರು ಬಿಜೆಪಿ ಕಚೇರಿಯಲ್ಲಿ ನಡೆಯಿತು.
ಬಿಜೆಪಿ ಪಕ್ಷದ ತತ್ವ ಸಿದ್ಧಾಂತವನ್ನು ಮೆಚ್ಚಿ ಹಾಗೂ ಕೇಂದ್ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಗಿರುವ ಅಭಿವೃದ್ಧಿಯನ್ನು ಮನಗಂಡು ಕಾಂಗ್ರೆಸ್ ಬೆಂಬಲಿತ 17 ಮಂದಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಶಾಸಕ ಕೆ ರಘುಪತಿ ಭಟ್ ರವರು ಭಾಗವಹಿಸಿ ಮಾತನಾಡಿ ಕೇಂದ್ರದಲ್ಲಿ ರಾಜ್ಯದಲ್ಲಿ ನಮ್ಮದೆ ಸರ್ಕಾರವಿದೆ ಸಂಸದರು ಶಾಸಕರು ಬಿಜೆಪಿ ಪಕ್ಷದವರೇ ಇದ್ದಾರೆ,ಈ ಬಾರಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದ ನಂತರ ತೆಂಕನಿಡಿಯೂರು ಗ್ರಾಮಕ್ಕೆ ಅನೇಕ ಅನುದಾನ ಮಂಜೂರಾಗಿ ಕಾಮಗಾರಿಯು ಪ್ರಗತಿಯಲ್ಲಿದೆ. ಪಂಚಾಯತ್ ಆಡಳಿತದಲ್ಲಿ ಬಿಜೆಪಿ ಬೆಂಬಲಿತರು ಇದ್ದಾಗ ಹೆಚ್ಚು ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಬಹುದು. ಈ ನಿಟ್ಟಿನಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದು ಹೇಳಿದರು. ಬಳಿಕ ಅಭ್ಯರ್ಥಿಗಳ ಆಯ್ಕೆಯ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಉಡುಪಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಶರತ್ ಬೈಲಕೆರೆ, ನಗರ ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷರಾದ ರೋಷನ್ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ಪಕ್ಷದ ಪ್ರಮುಖರಾದ ವಿಜಯ್ ಬೈಲಕೆರೆ, ತೆಂಕನಿಡಿಯೂರು ಗ್ರಾಮ ಪಂಚಾಯತ್ ಚುನಾವಣಾ ಉಸ್ತುವಾರಿಗಳಾದ ರಾಘವೇಂದ್ರ ಕಿಣಿ, ಸಹ ಉಸ್ತುವಾರಿಗಳಾದ ಸುಂದರ್ ಕಲ್ಮಾಡಿ ಮತ್ತು ತೆಂಕನಿಡಿಯೂರು ಪಂಚಾಯತ್ ಮಾಜಿ ಸದಸ್ಯರು ಹಾಗೂ ಪಕ್ಷದ ಹಿರಿಯರು, ಕಾರ್ಯಕರ್ತರು ಉಪಸ್ಥಿತರಿದ್ದರು.