ತೈಲ ಬೆಲೆ ಏರಿಕೆ ವಿರುದ್ದ ಕಾರ್ಕಳ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

Spread the love

ತೈಲ ಬೆಲೆ ಏರಿಕೆ ವಿರುದ್ದ ಕಾರ್ಕಳ ಯುವ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಉಡುಪಿ: ಕಾರ್ಕಳ ಯುವ ಕಾಂಗ್ರೆಸ್ ವತಿಯಿಂದ ಯುವ ಕಾಂಗ್ರೇಸ್ ಅಧ್ಯಕ್ಷರಾದ ಯೋಗೀಶ್ ಇನ್ನಾ ನೇತ್ರತ್ವದಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲ್ ಡೀಸೆಲ್ ಬೆಲೆಯೇರಿಕೆ ವಿರುದ್ಧ ಬೆಳ್ಮಣ್ ನ ಶ್ರೀ ಕೃಷ್ಣ ಪೆಟ್ರೋಲ್ ಪಂಪ್ ನ ಬಳಿ ಸಾಂಕೇತಿಕ ಪ್ರತಿಭಟನೆ ನಡೆಸಲಾಯಿತು.

ಈ ಪ್ರತಿಭಟನೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ನ ಅಧ್ಯಕ್ಷರಾದ ಸದಾಶಿವ ದೇವಾಡಿಗ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಕುಶ. ಆರ್. ಮೂಲ್ಯ,ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುಪ್ರೀತ್ ಶೆಟ್ಟಿ ಕೆದಿಂಜೆ,ರಾಜ್ಯ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿಗಳಾದ ರವಿಶಂಕರ್ ಶೇರಿಗಾರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ದೀಪಕ್ ಕೋಟ್ಯಾನ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಯೋಗೀಶ್ ನಯನ್ ಇನ್ನಾ,ಬ್ಲಾಕ್ ಯುವ ಕಾಂಗ್ರೆಸ್ ಕಾರ್ಯದರ್ಶಿಗಳಾದ ಪ್ರದೀಪ್ ಬೇಲಾಡಿಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಪ್ರವೀಣ್ ಸಾಲ್ಯಾನ್, ಅನಿತ ಫ್ರಾನ್ಸಿಸ್, ಮುಂಡ್ಕೂರು ಯುವ ಕಾಂಗ್ರೆಸ್ ಅಧ್ಯಕ್ಷರಾದ ಉತ್ತಮ್ ಚಂದ್ರ ರೈ,ಸಂತೋಷ್ ದೇವಾಡಿಗ ಬೋಳ ಮತ್ತು ಕಾರ್ಯಕರ್ತರು ಪಾಲ್ಗೊಂಡಿದ್ದರು.


Spread the love