ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಲಾರಿ ಬೈಕ್ ನಡುವೆ ಭೀಕರ ಅಪಘಾತ: ನವದಂಪತಿ ಸಾವು

Spread the love

ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಲಾರಿ ಬೈಕ್ ನಡುವೆ ಭೀಕರ ಅಪಘಾತ: ನವದಂಪತಿ ಸಾವು

ಮಂಗಳೂರು: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನವದಂಪತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.

ಮೃತರನ್ನು ಬಜಾಲ್ ನಿವಾಸಿ ರಾಯಾನ್ ಫೆರ್ನಾಂಡಿಸ್ (35) ಮತ್ತು ಪ್ರಿಯಾ ಫೆರ್ನಾಂಡಿಸ್ (32) ಎಂದು ಗುರುತಿಸಲಾಗಿದೆ.

ಮೃತ ದಂಪತಿಗಳು ತಮ್ಮ ಕೆಲಸ ಮುಗಿಸಿ ಉಳ್ಳಾಲ ಬಂಗೇರ ಲೇನ್ ನಲ್ಲಿರುವ ತಮ್ಮ ಬಾಡಿಗೆ ಮನೆಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಉಳ್ಳಾಲ ಕಡೆಗೆ ತಿರುಗುವ ಸಂದರ್ಭ ಅತಿ ವೇಗವಾಗಿ ತೊಕ್ಕೊಟ್ಟು ಫ್ಲೈಓವರ್ ಮೂಲಕ ಬಂದ ಲಾರಿ ಢಿಕ್ಕಿ ಹೊಡೆದು, ಇಬ್ಬರ ಮೇಲೂ ಚಲಿಸಿ ಕೆಲ ಮೀ. ದೂರಕ್ಕೆ ಎಳೆದುಕೊಂಡು ಹೋಗಿ ನಿಂತಿದೆ. ಘಟನೆಯಿಂದ ಪ್ರಿಯಾ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ರಯಾನ್ ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಸಾವನ್ನಪ್ಪಿದ್ದಾರೆ.

ಮಂಗಳೂರು ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


Spread the love