ತೊಕ್ಕೊಟ್ಟು: ರೈಲ್ವೇ ಹಳಿಯಲ್ಲಿ ಕಲ್ಲಿಟ್ಟ ಆಗಂತುಕರು ಸ್ಥಳೀಯ ಮನೆಗಳಲ್ಲಿ ಕಂಪನದ ಅನುಭವ

Spread the love

ತೊಕ್ಕೊಟ್ಟು: ರೈಲ್ವೇ ಹಳಿಯಲ್ಲಿ ಕಲ್ಲಿಟ್ಟ ಆಗಂತುಕರು ಸ್ಥಳೀಯ ಮನೆಗಳಲ್ಲಿ ಕಂಪನದ ಅನುಭವ

ತೊಕ್ಕೊಟ್ಟು: ರೈಲ್ವೇ ಹಳಿಯ ಎರಡೂ ಬದಿಗಳಲ್ಲಿ ಆಗಂತುಕರಿಬ್ಬರು ಜಲ್ಲಿಕಲ್ಲುಗಳನ್ನಿಟ್ಟ ಪರಿಣಾಮ ಎರಡು ರೈಲುಗಳು ಚಲಿಸುವ ಸಂದರ್ಭ ದೊಡ್ಡ ಸದ್ದು ಸ್ಥಳೀಯರಿಗೆ ಕೇಳಿಬಂದಿದ್ದು, ಸ್ಥಳೀಯರು ರೈಲ್ವೇ ಹಳಿಯತ್ತ ದೌಡಾಯಿಸಿದ್ದಾರೆ.

ತಡರಾತ್ರಿ ೮.೦೫ ರ ಸುಮಾರಿಗೆ ಕೊರಗಜ್ಜನ ಅಗೆಲು ಮುಗಿಸಿ ವಾಪಸ್ಸಾಗುತ್ತಿದ್ದ ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿ ಮಹಿಳೆಯರು ಹಳಿಯಲ್ಲಿ ಇಬ್ಬರು ಆಗಂತುಕರನ್ನು ಕಂಡಿದ್ದರು. ಅಲ್ಲಿಂದ ಮನೆಗೆ ತಲುಪುವಷ್ಟರಲ್ಲಿ ರೈಲೊಂದು ಕೇರಳ ಕಡೆಗೆ ತೆರಳಿತ್ತು. ಈ ವೇಳೆ ದೊಡ್ಡ ಸದ್ದು ಆವರಿಸಿತ್ತು. ಅದನ್ನು ಸ್ಥಳೀಯರು ಅಷ್ಟು ಗಂಭೀರವಾಗಿ ಪರಿಗಣಿಸಿರಲಿಲ್ಲ. ಬಳಿಕ ಇನ್ನೊಂದು ರೈಲು ಚಲಿಸುವಾಗ ಮತ್ತೊಮ್ಮೆ ದೊಡ್ಡ ಸದ್ದು ಆವರಿಸಿತ್ತು. ಪರಿಣಾಮ ಸ್ಥಳೀಯ ಕೆಲವು ಮನೆಗಳಲ್ಲಿಯೂ ಕಂಪನವುAಟಾಗಿತ್ತು. ತಕ್ಷಣವೇ ರೈಲು ಅಪಘಾತವೆಂದು ಭಾವಿಸಿ ಹಳಿಯತ್ತ ದೌಡಾಯಿಸಿದಾಗ ಹಳಿ ಮೇಲಿರಿಸಲಾದ ಜಲ್ಲಿಕಲ್ಲುಗಳು ತುಂಡಾಗಿರುವುದು ಅಲ್ಪಸ್ವಲ್ಪ ಕಂಡುಬAದಿದೆ.

೪೦ ವರ್ಷಗಳಿಂದ ತೊಕ್ಕೊಟ್ಟು ಪರಿಸರದಲ್ಲಿ ನೆಲೆಸಿದ್ದೇವೆ. ಆದರೆ ರೈಲು ದಾಟುವಾಗ ಕಂಪನದ ಅನುಭವ ಇದೇ ಮೊದಲ ಬಾರಿಗೆ ಆಗಿದೆ ಅನ್ನುವ ಅಭಿಪ್ರಾಯವನ್ನು ಸ್ಥಳೀಯ ಮಹಿಳೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ರೈಲ್ವೇ ಪೊಲೀಸ್ ಠಾಣೆ ಮತ್ತು ಉಳ್ಳಾಲ ಪೊಲೀಸ್ ಠಾಣೆಗೆ ಸ್ಥಳೀಯರು ಮಾಹಿತಿಯನ್ನು ನೀಡಿದ್ದಾರೆ. ಓವರ್ ಬ್ರಿಡ್ಜ್ ಕೆಳಗಡೆ ನಿತ್ಯ ಅಪರಿಚಿತರು ಬಂದು ಕುಳಿತು ಪಾನಮತ್ತರಾಗಿ ತೆರಳುತ್ತಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಹಲವು ದೂರುಗಳೇ ಇವೆ. ಇದೀಗ ಸಂಭಾವ್ಯ ಅನಾಹುತ ತಪ್ಪಿದೆ. ಮುಂದೊAದು ದಿನ ಅಪಾಯ ನಡೆಯುವ ಮುನ್ನ ಎಚ್ಚೆತ್ತು, ಸಂಬAಧಪಟ್ಟ ಇಲಾಖೆ ಸಿಸಿಟಿವಿ ಅಳವಡಿಸಬೇಕು ಅನ್ನುವ ಆಗ್ರಹ ಸ್ಥಳೀಯರು ವ್ಯಕ್ತಪಡಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments