ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವರ್ಗಾವಣೆ: ಜಿಪಂ ಸಿಇಒ ಡಾ.ಕುಮಾರ್ ಗೆ ಹೆಚ್ಚುವರಿ ಹೊಣೆ

Spread the love

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ವರ್ಗಾವಣೆ: ಜಿಪಂ ಸಿಇಒ ಡಾ.ಕುಮಾರ್ ಗೆ ಹೆಚ್ಚುವರಿ ಹೊಣೆ
 

ಮಂಗಳೂರು: ರಾಜ್ಯ ಸರಕಾರ ಹಲವು ಐಎಎಸ್ ಅಧಿಕಾರಿಗಳನ್ನು ಶನಿವಾರ ವರ್ಗಾವಣೆ ಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಮೈಸೂರು ಜಿಲ್ಲಾಧಿಕಾರಿಯಾಗಿ ನಿಯೋಜಿಸಲಾಗಿದೆ.

ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಿಇಒ ಡಾ.ಕುಮಾರ್ ಅವರಿಗೆ ಹೆಚ್ಚುವರಿ ಉಸ್ತುವಾರಿ ನೀಡಲಾಗಿದೆ.

ಡಾ. ರಾಜೇಂದ್ರ ಕೆ.ವಿ ಅವರು ಜುಲೈ 30, 2020 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.


Spread the love