ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ

Spread the love

ದಕ್ಷಿಣ ಕನ್ನಡ ಜಿಲ್ಲಾ ಡಿಡಿಪಿಐ ದಯಾನಂದ ರಾಮಚಂದ್ರ ನಾಯ್ಕ ವರ್ಗಾವಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರಿಗೆ ಬೆಳಗಾವಿಗೆ ವರ್ಗಾವಣೆಯಾಗಿದ್ದು, ತೆರವಾಗಿರುವ ಸ್ಥಾನಕ್ಕೆ ಕಲಬುರಗಿಯ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯ ಉಪನಿರ್ದೇಶಕ (ಯೋಜನೆ) ವೆಂಕಟೇಶ ಸುಬ್ರಾಯ ಪಟಗಾರ ಅವರನ್ನು ನಿಯೋಜಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿದ್ದ ದಯಾನಂದ ರಾಮಚಂದ್ರ ನಾಯ್ಕ ಅವರನ್ನು ಬೆಳಗಾವಿಯ ಸರಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದ ಪ್ರವಾಚಕರಾಗಿ ವರ್ಗಾಯಿಯಿಸಿ ಸರಕಾರದ ಅಧೀನ ಕಾರ್ಯದರ್ಶಿ (ಆಡಳಿತ) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಲ್ಲಿಕಾರ್ಜುನ ರಾಮಚಂದ್ರಪ್ಪ ಬುಧವಾರ ಆದೇಶ ನೀಡಿದ್ದಾರೆ.


Spread the love