ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ

Spread the love

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆ

ಮಂಗಳೂರು: ಕೋವಿಡ್-19 ಸೋಂಕಿನ ಕಾರಣದಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ ಸುದ್ದಿಯಿಂದ ಆಘಾತದಲ್ಲಿರುವ ದಕ್ಷಿಣ ಕನ್ನಡದಲ್ಲಿ ಮಂಗಳವಾರ ಮತ್ತೊಂದು ಕೊರೋನಾ ಸೋಂಕು ಪ್ರಕರಣ ಪಾಸಿಟಿವ್ ಆಗಿದೆ.

ಬಂಟ್ವಾಳದ 67 ವರ್ಷದ ಮಹಿಳೆಗೆ ಕೋರೊನಾ ಸೋಂಕು ಕಾಣಿಸಿಕೊಂಡಿದ್ದು ಆಕೆ ಭಾನುವಾರ ಕೊರೋನಾ ಪಾಸಿಟಿವ್ ನಿಂದ ಮೃತರಾದ ಮಹಿಳೆಯ ಸಂಪರ್ಕದಲ್ಲಿದ್ದರು. ಪ್ರಸ್ತುತ ಜಿಲ್ಲೆಯಲ್ಲಿ ಕೊರೋನಾ ಪೀಡಿತರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿಂದು ಮಧ್ಯಾಹ್ನದವರೆಗೆ ಏಳು ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿದೆ. ಒಟ್ತಾರೆ ಸೋಂಕಿತರ ಸಂಖ್ಯೆ 415ಕ್ಕೆ ಏರಿಕೆಯಾಗಿದ್ದು ಇದುವರೆಗೆ 17ಮಂದಿ ಮೃತಪಟ್ಟಿದ್ದಾರೆ.

ಹೊಸದಾಗಿ ಗುರುತಿಸಲಾಗಿರುವ ಪ್ರಕರಣದಲ್ಲಿ ದಕ್ಷಿಣ ಕನ್ನಡದಲ್ಲಿ ಒಂದು, ವಿಜಯಪುರದಿಂದ ಮೂರು, ಕಲಬುರಗಿಯಿಂದ ಮೂರು ಪ್ರಕರಣಗಳಿದೆ.


Spread the love