ದಕ ಜಿಲ್ಲಾಧಿಕಾರಿ ವಿರುದ್ದ ಏಕವಚನ ಉಪಯೋಗಿಸಿದ ಆರೋಪ – ಹಿಂಜಾವೇ ನಾಯಕ ಜಗದೀಶ್‌ ಕಾರಂತ್‌ ವಿರುದ್ದ ಪ್ರಕರಣ ದಾಖಲು

Spread the love

ದಕ ಜಿಲ್ಲಾಧಿಕಾರಿ ವಿರುದ್ದ ಏಕವಚನ ಉಪಯೋಗಿಸಿದ ಆರೋಪ – ಹಿಂಜಾವೇ ನಾಯಕ ಜಗದೀಶ್‌ ಕಾರಂತ್‌ ವಿರುದ್ದ ಪ್ರಕರಣ ದಾಖಲು

ಮಂಗಳೂರು: ದಕ ಜಿಲ್ಲಾಧಿಕಾರಿಯನ್ನು ಎಕವಚನದಲ್ಲಿ ಕರೆಯುವುದರೊಂದಿಗೆ ಹುದ್ದೆಗೆ ಅಗೌರವ ತೋರಿಸಿದ ಹಿಂದೂ ಜಾಗರಣಾ ವೇದಿಕೆ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಜಗದೀಶ್‌ ಕಾರಂತ್‌ ಅವರ ವಿರುದ್ದ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ಅವರು ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದು ನವೆಂಬರ್‌ 21 ರಂದು ಬಂಟ್ವಾಳ ತಾಲೂಕು ಕಾವಳಮುಡೂರು ಗ್ರಾಮದ ಕಾರಿಂಜ ರಥಬೀದಿಯಲ್ಲಿ ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ರವರ ವತಿಯಿಂದ ರುದ್ರಗಿರಿಯ ರಣಕಹಳೆ ಎಂಬ ಬೃಹತ್ ಜನಜಾಗೃತಿ ಸಭೆಯಲ್ಲಿ ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ್‌ ಕಾರಂತ್‌ ಅವರು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಗಳಾದ ಡಾ|| ರಾಜೇಂದ್ರ ಕೆ ವಿ (ಭಾ.ಆ.ಸೇ) ರವರನ್ನುದ್ದೇಶಿಸಿ, ಬಂಟ್ವಾಳ ತಾಲೂಕಿನ ಕಾರೀಂಜೇಶ್ವರ ದೇವಸ್ಥಾನದ ಸುತ್ತಮುತ್ತ ನಡೆಯುವ ಗಣಿಗಾರಿಕೆಯನ್ನು ನಿಲ್ಲಿಸಲು ಡಿಸೆಂಬರ್ 21 ರವರೆಗೆ ಗಡುವು ಕೊಟ್ಟಿದ್ದೇವೆ, ಇಲ್ಲದಿದ್ದರೆ ಡಿಸೆಂಬರ್ 21 ಕ್ಕೆ ಎಲ್ಲರೂ ಸಿದ್ದರಾಗಿ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ, ಜಿಲ್ಲಾಧಿಕಾರಿಗಳ ಕಛೇರಿಗೆ ಲಗ್ಗೆ ಹಾಕಿ, ಅವನ ಕೊರಳು ಪಟ್ಟಿಯನ್ನು ಹಿಡಿಯುತ್ತೀವಿ. ತಾಕತ್ತಿದ್ದರೆ ಕಲ್ಲುಗಣಿಗಾರಿಕೆಯನ್ನು ನಿಲ್ಲಿಸೋ..ಇಲ್ಲವಾದರೇ ಟ್ರಾನ್ಸ್‌ ಫರ್ ತೆಗೆದುಕೊಂಡು ಹೋಗೋ..ಎಂಬಿತ್ಯಾದಿ ರೀತಿಯಲ್ಲಿ ಏಕವಚನ ಮತ್ತು ಅಸಭ್ಯವಾಗಿ ಮಾತುಗಳನ್ನಾಡುವ ಮೂಲಕ ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ತೋರಿಸಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಬೆದರಿಕೆಯೊಡ್ಡುವ ರೀತಿಯಲ್ಲಿ ಪ್ರಚೋದನೆಯನ್ನು ಹಾಗೂ ಅಪಾರದಕ್ಕೆ ದುಷ್ಪ್ರೇರಣೆ ನೀಡಿರುತ್ತಾರೆ.

ಜಗದೀಶ್ ಕಾರಂತ್‌ ರವರು ಅಪರಾಧಿಕ ಕೃತ್ಯವನ್ನು ಎಸಗುವ ಮನೋದೋರಣೆ ಹೊಂದಿ ಪ್ರಚೋದಾನಾಧಿಕಾರಿಯಾಗಿ ಬೆದರಿಕೆಯೊಡ್ಡಿರುವುದರಿಂದ ಮತ್ತು ಸಾವಿರಾರು ಜನಕ್ಕೆ ಅಪರಾಧಿಕ ಕೃತ್ಯವೆಸಗಲು ಪ್ರೇರಣೆ ನೀಡಿ ಅಪರಾಧಿಕಾ ಭೀತಿಯನ್ನುಂಟು ಮಾಡಿರುತ್ತಾರೆ. ಹಾಗೂ ಅಪರಾಧ ಕೃತ್ಯ ನಡೆಸಲು ಪ್ರೇರಣೆಯನ್ನು ಮತ್ತು ಬೆದರಿಕೆಯನ್ನೊಡ್ಡಿದ್ದು, ಡಿಸೆಂಬರ್ 21 ಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿ ಕಛೇರಿಗೆ ಲಗ್ಗೆ ಹಾಕಿ ಜಿಲ್ಲಾಧಿಕಾರಿಗಳ ಕೊರಳಪಟ್ಟಿ ಹಿಡಿಯಿರಿ ಎಂದು ಪ್ರಚೋದಿಸುವ ಮೂಲಕ ಸಾರ್ವಜನಿಕ ನೌಕರನಿಗೆ ಅಪರಾಧಿಕ ಭೀತಿಯನ್ನುಂಟು ಮಾಡಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಹಾನಿ ಮತ್ತು ಹಲ್ಲೆ ಮಾಡಲು ಪ್ರಚೋದಿಸಿ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳ ದೂರಿನಂತೆ ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


Spread the love