ದಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಗೆ ಕೊಲೆ ಬೆದರಿಕೆ – ವ್ಯಕ್ತಿಯ ಬಂಧನ

Spread the love

ದಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಗೆ ಕೊಲೆ ಬೆದರಿಕೆ – ವ್ಯಕ್ತಿಯ ಬಂಧನ

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ನಿರ್ಗಮನ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರಿಗೆ ಕೊಲೆ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಒರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಬಜ್ಪೆ ನಿವಾಸಿ ರಂಜಿತ್ ಎಂದು ಗುರುತಿಸಲಾಗಿದೆ.

ಜಾನುವಾರು ಸಾಗಾಟಗಾರರ ಮೇಲೆ ನಡೆಸಲಾಗುತ್ತಿರುವ ಹಲ್ಲೆಗಳನ್ನು ಉಲ್ಲೇಖಿಸಿ ಕಾನೂನು ಕ್ರಮದ ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸಭೆಯೊಂದರಲ್ಲಿ ಸೋಮವಾರ ನೀಡಿದ್ದರು. ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗವಾಗಿ ಜಿಲ್ಲಾಧಿಕಾರಿಯನ್ನು ಕೊಲೆ ಮಾಡಬೇಕು ಎಂದು ಬೆದರಿಕೆ ಹಾಕಿದ್ದು, ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು ಅದರಂತೆ ಬಜ್ಪೆ ನಿವಾಸಿ ರಂಜಿತ್ ಎಂಬಾತನನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
.


Spread the love