ದಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್ ಅವರಿಗೆ ಸಮಾಜಶಾಸ್ತ್ರದಲ್ಲಿ ಪಿಹೆಚ್ ಡಿ ಪದವಿ

Spread the love

ದಕ ಜಿಲ್ಲಾ ಅಪರ ಜಿಲ್ಲಾಧಿಕಾರಿ ಕುಮಾರ್ ಅವರಿಗೆ ಸಮಾಜಶಾಸ್ತ್ರದಲ್ಲಿ ಪಿಹೆಚ್ ಡಿ ಪದವಿ

ಮಂಗಳೂರು: ದಕ್ಷಿಣ ಕನ್ನಡದ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಕುಮಾರ್ ಅವರು ಕುವೆಂಪು ವಿಶ್ವ ವಿದ್ಯಾನಿಲಯದಿಂದ ಸಮಾಜ ಶಾಸ್ತ್ರ ವಿಷಯದಲ್ಲಿ ಪಿ ಹೆಚ್ ಡಿ ಪದವಿಯನ್ನು ಪಡೆದಿದ್ದಾರೆ.

The Role of E-Governance in Modernization of Land Records; A Sociological Study in Karnataka ಎಂಬ ಆಸಕ್ತಿದಾಯಕ ಹಾಗೂ ಉದಯೋನ್ಮುಖ ವಿಷಯದ ಕುರಿತು ಡಾ. ಗುರುಲಿಂಗಯ್ಯ ಪ್ರಾಧ್ಯಾಪಕರು ಕುವೆಂಪು ವಿಶ್ವವಿದ್ಯಾನಿಲಯ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನ ಪ್ರಬಂಧವನ್ನು ಮಂಡಿಸಿದ್ದರು. ಕಳೆದ 5 ವರ್ಷಗಳಿಂದ ಅಧ್ಯಯನ ನಡೆಸಿ ಇತ್ತಿಚೆಗೆ ಪ್ರಬಂಧವನ್ನು ಕುಮಾರ್ ಅವರು ಮಂಡಿಸಿದ್ದು, ಸದ್ರಿ ಸಂಶೋಧನಾ ಪ್ರಬಂಧಕ್ಕೆ ಪಿ ಹೆಚ್ ಡಿ ಪದವಿ ನೀಡಲಾಗಿದೆ.


Spread the love