ದಕ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಲಾರೆನ್ಸ್ ಡಿಸೋಜಾ ನೇಮಕ

Spread the love

ದಕ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಲಾರೆನ್ಸ್ ಡಿಸೋಜಾ ನೇಮಕ

ಮಂಗಳೂರು: ಕೆ.ಪಿ.ಸಿ.ಸಿ ಕಾರ್ಮಿಕ ವಿಭಾಗದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಲಾರೆನ್ಸ್ ಡಿಸೋಜಾ ಅವರನ್ನು ನೇಮಕಗೊಳಿಸಿ ರಾಜ್ಯಾಧ್ಯಕ್ಷರಾದ ಪುಟ್ಟ ಸ್ವಾಮಿ ಗೌಡ ಅವರು ಆದೇಶ ಹೊರಡಿಸಿದ್ದಾರೆ.

ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ರವರ ಅನುಮೋದನೆಯೊಂದಿಗೆ, ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷರಾದ ಸಲೀಮ್ ಅಹ್ಮದ್ ರವರ ಮತ್ತು ದಕ್ಷಿಣ ಕನ್ನದ ಜಿಲ್ಲಾಧ್ಯಕ್ಷರಾದ ಸನ್ಮಾನ್ಯ ಕೆ.ಹರೀಶ್ ಕುಮಾರ್ರವರ ಶಿಫಾರಸ್ಸಿನ ಮೇರೆಗೆ ಲಾರೆನ್ಸ್ ಡಿಸೋಜಾ ಅವರ ನೇಮಕ ಮಾಡಲಾಗಿದ್ದು, ಅವರಿಗೆ ವಹಿಸಲಾಗಿರುವ ಹೊಣೆಗಾಲಕೆಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ತಮಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ, ಪಕ್ಷದ ಸಂಘಟನೆಗೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಶ್ರಮಿಸುವಂತೆ ರಾಜ್ಯಾಧ್ಯಕ್ಷರಾದ ಪುಟ್ಟ ಸ್ವಾಮಿ ಗೌಡ ಅವರು ಆದೇಶದಲ್ಲಿ ಸೂಚಿಸಿದ್ದಾರೆ,


Spread the love