ದಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆಸ್ಕರ್ ಫೆರ್ನಾಂಡಿಸ್ ಪುಣ್ಯ ಸ್ಮರಣೆ

Spread the love

ದಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಆಸ್ಕರ್ ಫೆರ್ನಾಂಡಿಸ್ ಪುಣ್ಯ ಸ್ಮರಣೆ

ಮಂಗಳೂರು: ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಕೇಂದ್ರ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅವರ ಪುಣ್ಯಸ್ಮರಣೆ ಕಾರ್ಯಕ್ರಮ ಬುಧವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ಮಾತನಾಡಿ, ಲೋಕಸಭಾ, ರಾಜ್ಯಸಭಾ ಸದಸ್ಯರಾಗಿ, ಕೇಂದ್ರ ಸಚಿವರಾಗಿ, ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದ ಆಸ್ಕರ್ ಫರ್ನಾಂಡಿಸ್ ಅವರು ಸಾಮಾನ್ಯ ಕಾರ್ಯಕರ್ತರಂತೆ ಗುರುತಿಸಿಕೊಂಡಿದ್ದರು. ಮೃದು, ಪ್ರಾಮಾಣಿಕ ವ್ಯಕ್ತಿಯಾಗಿದ್ದ ಅವರು ಓರ್ವ ಅಜಾತ ಶತ್ರು. ಎಲ್ಲರ ಜೊತೆ ಪ್ರೀತಿ ವಿಶ್ವಾಸದಿಂದ ನಡೆದುಕೊಳ್ಳುತ್ತಿದ್ದರು. ಅವರ ಬದುಕು ಇತರ ನಾಯಕರಿಗೆ ಮಾದರಿ. ರಾಜ್ಯಕ್ಕೆ ಅವರ ಕೊಡುಗೆ ಅಪಾರ ಎಂದು ಸ್ಮರಿಸಿಕೊಂಡರು.

ಈ ಸಂದರ್ಭ ಇಬ್ರಾಹೀಂ ಕೋಡಿಜಾಲ್, ಎಸ್.ಅಪ್ಪಿ, ಜೆ.ಅಬ್ದುಲ್ ಸಲೀಂ, ನವೀನ್ ಡಿಸೋಜ, ಶಾಹುಲ್ ಹಮೀದ್, ಶುಬೋದಯ ಆಳ್ವ, ಟಿ.ಹೊನ್ನಯ್ಯ, ನೀರಜ್ ಚಂದ್ರಪಾಲ್, ಲತೀಫ್ ಕುಂದಕ್, ಸಬಿತಾ ಮಿಸ್ಕಿತ್, ಜೆಸಿಂತಾ ಆಲ್ಫ್ರೆಡ್, ಕವಿತಾ ವಾಸು, ಸಂಶುದ್ದೀನ್ ಬಂದರ್, ಅಶ್ರಫ್ ಬಜಾಲ್, ಮುಹಮ್ಮದ್ ಅಲ್ತಾಫ್ ಸುರತ್ಕಲ್, ಸುಹಾನ್ ಆಳ್ವ, ಡಿ.ಎಂ.ಮುಸ್ತಫಾ, ಭಾಸ್ಕರ್ ರಾವ್, ಶಬ್ಬೀರ್ ಎಸ್, ನಝೀರ್ ಬಜಾಲ್, ವಿಕಾಶ್ ಶೆಟ್ಟಿ, ಲಕ್ಷ್ಮಣ್ ಶೆಟ್ಟಿ, ಶಮೀರ್ ಪಜೀರ್, ಟಿ.ಕೆ.ಸುಧೀರ್, ಸೋನ್ ಡಿಸೋಜ, ಫಯಾಝ್ ಅಮ್ಮೆಮ್ಮಾರ್, ಮಂಜುಳಾ ನಾಯಕ್, ಸಮರ್ಥ್ ಭಟ್, ಇಮ್ರಾನ್ ಎ.ಆರ್, ಚಂದ್ರಕಲಾ ಜೋಗಿ, ಸುರೇಶ್ ಪೂಜಾರಿ ಕುಳಾಯಿ, ಯಶವಂತ ಪ್ರಭು ಮತ್ತಿತರು ಉಪಸ್ಥಿತರಿದ್ದರು.

ಮಾಜಿ ಮೇಯರ್ ಶಶಿಧರ್ ಹೆಗ್ಡೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.


Spread the love

Leave a Reply

Please enter your comment!
Please enter your name here