ದಕ ಜಿಲ್ಲಾ ಬಂದ್ ನಡುವೆಯೂ ನಡೆಯುಲಿರುವ ಪ್ರಥಮ ಪಿಯುಸಿ ಪರೀಕ್ಷೆ

Spread the love

ದಕ ಜಿಲ್ಲಾ ಬಂದ್ ನಡುವೆಯೂ ನಡೆಯುಲಿರುವ ಪ್ರಥಮ ಪಿಯುಸಿ ಪರೀಕ್ಷೆ

ಮಂಗಳೂರು: ದಕ ಜಿಲ್ಲಾ ಬಂದ್ ಕರೆಯ ನಡುವೆ ಪ್ರಥಮ ಪಿಯುಸಿ ಪರೀಕ್ಷೆಗಳು ಯಥಾ ಪ್ರಕಾರ ಶನಿವಾರ ನಡೆಯಲಿದೆ ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿರುವ ಕುಮಾರ್ ಪ್ರಕಟಿಸಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳೂರಿಗೆ ಆಗಮಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಮಂಗಳೂರು ಬಂದಿಗೆ ಕರೆ ನೀಡಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಆದರೆ ಸದ್ರಿ ದಿನದಂದು ಜಿಲ್ಲೆಯಾದ್ಯಂತ ಪ್ರಥಮ ಪಿಯುಸಿ ಪರೀಕ್ಷೆಗಳು ನಡೆಯಲಿದ್ದು, ಸುಮಾರು 124 ಕಾಲೇಜುಗಳಲ್ಲಿ 17,315 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ.

ಆದ್ದರಿಂದ ವಿದ್ಯಾರ್ಥಿಗಳು ಪರೀಕ್ಷೆಯನ್ನು ಮುಕ್ತವಾಗಿ ಬರೆಯುವ ದೃಷ್ಟಿಯಿಂದ ಸೂಕ್ತ ಬಂದೋಬಸ್ತು ಹಾಗೂ ಬಸ್ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ.  ಆದ್ದರಿಂದ ವಿದ್ಯಾರ್ಥಿಗಳು ನಿರ್ಭಯವಾಗಿ ಪರೀಕ್ಷೆಯಲ್ಲಿ ಪಾಲ್ಗೊಳ್ಳಲು ಕೋರಲಾಗಿದ್ದು, ಹಾಗೂ ಸಾರ್ವಜನಿಕರು ಹಾಗೂ ಸಂಘ ಸಂಸ್ಥಗಳು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಹಕರಿಸುವಂತೆ ಅವರು ಕೋರಿದ್ದಾರೆ.


Spread the love