ದಕ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ ದಾಖಲು

Spread the love

ದಕ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ ದಾಖಲು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು,   45 ವರ್ಷದ ಪುರುಷ ಹಾಗೂ 80 ವರ್ಷದ ಮಹಿಳೆಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ರೋಗಿ ಸಂಖ್ಯೆ ಪಿ 432 ರ ಜೊತೆ ಸಂಪರ್ಕ ಹೊಂದಿರುವ  45 ವರ್ಷದ ಪುರುಷ ಹಾಗೂ 80 ವರ್ಷದ ಮಹಿಳೆಯ ಗಂಟಲು ದ್ರವ ಪರೀಕ್ಷೆ ವರದಿ ಸ್ವೀಕೃತವಾಗಿದ್ದು, ಇವರಿಗೆ ಸೋಂಕು ಇರುವುದು ದೃಢಪಟ್ಟಿರುತ್ತದೆ. ಇವರಿಗೆ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.


Spread the love