ದಕ ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ – ಬಂಟ್ವಾಳದ 33 ವರ್ಷದ ಮಹಿಳೆಗೆ ಸೋಂಕು ದೃಢ

Spread the love

ದಕ ಜಿಲ್ಲೆಯಲ್ಲಿ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ – ಬಂಟ್ವಾಳದ 33 ವರ್ಷದ ಮಹಿಳೆಗೆ ಸೋಂಕು ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮತ್ತೊಂದು ಕೊರೋನಾ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, ಬಂಟ್ವಾಳ ತಾಲೂಕಿನ 33 ವರ್ಷದ ಮಹಿಳೆಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.

ರೋಗಿ ಸಂಖ್ಯೆ ಪಿ 409 ರ ಜೊತೆ ಸಂಪರ್ಕ ಹೊಂದಿರುವ ಬಂಟ್ವಾಳ ಕಸಬಾ ನಿವಾಸಿ ಸುಮಾರು 33 ವರ್ಷದ ಮಹಿಳೆಯ ಗಂಟಲು ದ್ರವ ಪರೀಕ್ಷೆ ವರದಿ ಸ್ವೀಕೃತವಾಗಿದ್ದು, ಇವರಿಗೆ ಸೋಂಕು ಇರುವುದು ದೃಢಪಟ್ಟಿರುತ್ತದೆ. ಇವರಿಗೆ ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.


Spread the love