ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ. ಆರ್. ರವಿಕುಮಾರ್ ಅಧಿಕಾರ ಸ್ವೀಕಾರ

Spread the love

ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ. ಆರ್. ರವಿಕುಮಾರ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ. ಆರ್. ರವಿಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು.

ಪ್ರಭಾರ ಜಿಲ್ಲಾಧಿಕಾರಿ ಹಾಗೂ ದಕ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಅವರು ನೂತನ ಜಿಲ್ಲಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಿದರು.

ರವಿಕುಮಾರ್ ಅವರು 2012 ರ ಬ್ಯಾಚ್‌ನ ಕರ್ನಾಟಕ ಕೇಡರ್‌ನ ಐಎಎಸ್ ಆಗಿದ್ದು,ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು.


Spread the love